Tuesday, January 21, 2025

ಸತ್ಯ | ನ್ಯಾಯ |ಧರ್ಮ

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಸಮರ ಸಾರಿದ ಡೊನಾಲ್ಡ್ ಟ್ರಂಪ್ ಸರ್ಕಾರ

ಅಮೆರಿಕದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿರುವ ನಡುವೆಯೇ ರಿಪಬ್ಲಿಕನ್ ಪಕ್ಷದ ನಾಯಕ ಹಾಗೂ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ “ಅಮೆರಿಕದಲ್ಲಿರುವುದು ಎರಡೇ ಲಿಂಗ.. ಗಂಡು ಮತ್ತು ಹೆಣ್ಣು” ಎಂದು ಘೋಷಣೆ ಮಾಡಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ನಂತರ ಅಮೆರಿಕವನ್ನುದ್ದೇಶಿಸಿ ಮಾತನಾಡಿದ ಟ್ರಂಪ್‌, ‘ಇನ್ನು ಮುಂದೆ ಅಮೆರಿಕದಲ್ಲಿ ಗಂಡು ಮತ್ತು ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಾಗುತ್ತದೆ. ಇದೇ ನಮ್ಮ ಸರ್ಕಾರದ ಅಧಿಕೃತ ನೀತಿಯಾಗಲಿದೆ’ ಎಂದು ಹೇಳಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಅಮೆರಿಕದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ. ಮಹಿಳಾ ಕ್ರೀಡಾಕೂಟದಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಭಾಗವಹಿಸುವುದನ್ನು ರಿಪಬ್ಲಿಕನ್ ಪಕ್ಷದ ಅನೇಕರು ವಿರೋಧಿಸಿದ್ದರು.

‘ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ(ಡಿಇಐ) ಕಾರ್ಯಕ್ರಮದ ಮೇಲೆ ಟ್ರಂಪ್‌ ಸರ್ಕಾರ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದು, ಕಾರ್ಯಕಾರಿ ಆದೇಶ ಜಾರಿಯಾದರೆ ಡಿಇಐ ಕಾರ್ಯಕ್ರಮಗಳನ್ನು ಉತ್ತೇಜಿಸಲು ಸರ್ಕಾರದ ನಿಧಿ ಬಳಸಲು ಸಾಧ್ಯವಾಗುವುದಿಲ್ಲ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚುನಾವಣೆ ವೇಳೆ ನೀಡಿದ ಭರವಸೆಯಂತೆ ಲಿಂಗ ವೈವಿಧ್ಯತೆ ಕುರಿತು ಅಮೆರಿಕ ಸರ್ಕಾರದ ನೀತಿಗಳನ್ನು ಬದಲಾಯಿಸಲು ಟ್ರಂಪ್ ಸರ್ಕಾರ ಮುಂದಾಗಿದ್ದು ಈ ಎಲ್ಲಾ ಅಂಶಗಳಿಂದ ಸಾಬೀತುಪಡಿಸಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page