Wednesday, January 22, 2025

ಸತ್ಯ | ನ್ಯಾಯ |ಧರ್ಮ

ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು ; ಮತ್ತೆ ಸಂಕಷ್ಟದಲ್ಲಿ ಬಿಜೆಪಿ ಶಾಸಕ

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ವಾಸಿಸುತ್ತಿರುವ ಸ್ಲಂ ನಿವಾಸಿಗಳ ಮೇಲೆ ಮಾಡಿದ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

ಮುನಿರತ್ನ ಮತ್ತು ಅವರ ಸಹಚರರು ಮಾಡಿದ ದೌರ್ಜನ್ಯಕ್ಕೆ ಈ ಎಫ್ಐಆರ್ ದಾಖಲಾಗಿದ್ದು, ಮನೆ ನೆಲಸಮ ಮಾಡಿ ಶಾಸಕ ಮುನಿರತ್ನ ಮತ್ತು ಸಹಚರರು ದರ್ಪ ಮೆರೆದಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.

ಮುನಿರತ್ನ ಸಹಚರರಾದ ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಮನೆಯಲ್ಲಿ ಕೂಡಿಟಿದ್ದ ಸಾವಿರಾರು ರೂಪಾಯಿ ಹಣ 30 ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯಶವಂತಪುರ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page