ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

PPeepal Media

Peepal Media • ರಾಜಕೀಯ

• 1 ನಿಮಿಷದ ಓದು

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
* ಅನಾರೋಗ್ಯದ ಕಾರಣ ರಾಹುಲ್ ಗೈರು: 
* ತಿರುಚಿ ಸುದ್ದಿ ಮಾಡಿದರೆ ಪತ್ರಿಕಾ ವೃತ್ತಿಯ ಬಗ್ಗೆ ಯಾವ ಸಂದೇಶ ಹೋಗುತ್ತದೆ: ಸಿ.ಎಂ ಪ್ರಶ್ನೆ

ಬೆಳಗಾವಿ, ಜನವರಿ 21: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗಾಂಧೀಜಿ ಹಾಗು ಅವರ ವಿಚಾರಧಾರೆಗಳು ಇಡೀ ವಿಶ್ವಕ್ಕೆ ಇಂದಿಗೂ ಪ್ರಸ್ತುತ ಎಂದರು.

ಗಾಂಧೀಜಿ ಸೌಹಾರ್ದತೆ, ಸಮಾನತೆ ಬರಬೇಕು, ಅಸ್ಪೃಶ್ಯತೆ ಹೋಗಲಾಡಿಸಲು, ಮಹಿಳೆಯರಿಗೆ ಸ್ವಾತಂತ್ರ್ಯ ಅವರ ಹಕ್ಕುಗಳ ರಕ್ಷಣೆಯಾಗಬೇಕೆಂದು ಪ್ರತಿಪಾದಿಸಿದ್ದರು. ಗಾಂಧೀಜಿ, ಬಸವಣ್ಣ, ಕನಕದಾಸರ ವಿಚಾರಗಳು ಸಂವಿಧಾನದಲ್ಲಿ ಅಡಕವಾಗಿವೆ ಎಂದರು.

“ಕಾಂಗ್ರೆಸ್ ಸಂವಿಧಾನದ ಪರವಾಗಿದೆ“

ಗಾಂಧೀಜಿ, ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಅನಾಹುತಕಾರಿ ರಾಜಕಾರಣ ನಡೆಯುತ್ತಿದೆ. ಅದ್ದರಿಂದ ಇವುಗಳ ರಕ್ಷಣೆ ಮಾಡುವುದು ಕಾಂಗ್ರೆಸ್ ನ ಜವಾಬ್ದಾರಿ. ನಾವು ಸಂವಿಧಾನದ ಪರವಾಗಿದ್ದೇವೆ. ಅವರು ಮನುವಾದದ ಪರವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಾರೋಗ್ಯ ನಿಮಿತ್ತ ರಾಹುಲ್ ಗಾಂಧಿ ಗೈರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು. ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದಾರೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು