Tuesday, January 21, 2025

ಸತ್ಯ | ನ್ಯಾಯ |ಧರ್ಮ

ಸುತ್ತೂರು ಮಠದಿಂದ 2 ಲಕ್ಷಕ್ಕೂ ಅಧಿಕ ಉಪಕರಣ ಸರಕಾರಿ ವಾಣಿವಿಲಾಸ ಶಾಲೆಗೆ ಕೊಡುಗೆ

ಹಾಸನ: ಶ್ರೀಕ್ಷೇತ್ರ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಕೃಪಾ ಆಶೀರ್ವಾದದಿಂದ ಸುಮಾರು 2 ಲಕ್ಷಕ್ಕೂ ಅಧಿಕ ಮೊತ್ತದ ದೂರದರ್ಶಕ ಯಂತ್ರ, ಸೂಕ್ಷ್ಮ ದರ್ಶಕ ಯಂತ್ರ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉಪಕರಣಗಳನ್ನು ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿ ವಿಲಾಸ ಶಾಲೆಗೆ ನೀಡಿದ್ದಾರೆ ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ತಿಳಿಸಿದರು.


ನಗರದ ಮಹಾವೀರ ವೃತ್ತದ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿವಿಲಾಸ ಶಾಲೆಯ ಮುಖ್ಯ ಶಿಕ್ಷಕರಾದ ಮೀನಾಕ್ಷಿ ಅವರಿಗೆ ಉಪಕರಣಗಳನ್ನು ಹಸ್ತಂತರಿಸಿದ ನಂತರ ಮಾತನಾಡಿದ ಅವರು, ಸುತ್ತೂರು ಮಠದಿಂದ ಸುಮಾರು 80 ಸಾವಿರ ಮೌಲ್ಯದ ದೂರದರ್ಶಕ ಯಂತ್ರ, ಸುಮಾರು 8 ಸಾವಿರ ಮೌಲ್ಯದ ಸೂಕ್ಷ್ಮದರ್ಶಕ ಯಂತ್ರಗಳು ಮತ್ತು ಸುಮಾರು 1 ಲಕ್ಷಕ್ಕೂ ಮೀರಿದ ಮೌಲ್ಯದ ಸಾವಿರಕ್ಕೂ ಅಧಿಕ ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕವಾದ ಅಕ್ವಾಗಾರ್ಡ್ಗಳು ಸುತ್ತೂರು ಮಠದಿಂದ ಮಹಾಪ್ರಸಾದವಾಗಿ ಶಾಲೆಗೆ ದೊರೆತ ಸುದಿನವಾಗಿದೆ ಎಂದರು.


ಸಹಕಾರವನ್ನು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿಯವರೊಂದಿಗೆ ಇತ್ತೀಚಗೆ ಸುತ್ತೂರು ಜಗದ್ಗುರುಗಳು ಹಾಸನದ ಧಾರ್ಮಿಕ ಕಾರ್ಯಕ್ರಮಕ್ಕೆ ಅಗಮಿಸಿದ ಸಂದರ್ಭದಲ್ಲಿ ನಮ್ಮ ಸರ್ಕಾರಿ ಪ್ರಾಥಮಿಕ ವಾಣಿವಿಲಾಸ ಶಾಲೆಯಲ್ಲಿ ವಚನ ಕಂಠಪಾಠ ಕಾರ್ಯಕ್ರಮಕ್ಕೆ ಕರೆಸಿ ಉತ್ತಮ ರೀತಿಯಲ್ಲಿ ಕಾರ್ಯಕ್ರಮ ಮಾಡಿದ ಅವರು ಹೆಚ್ಚಿನ ಸಹಕಾರ ನೀಡಿ ಸುತ್ತೂರು ಮಠದಿಂದ ಉಪಕರಣಗಳನ್ನು ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು. ಜೆಎಸ್‌ಎಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಬಿ. ಮಧು ಕುಮಾರ್ ಹಾಗೂ ಬಾಲು ಸ್ವತಃ ಶಾಲೆಗೆ ಭೇಟಿ ನೀಡಿ ದೂರದರ್ಶಕ ಯಂತ್ರ ಸೂಕ್ಷ÷್ಮದರ್ಶಕ ಯಂತ್ರ ಹಾಗೂ ಅಕ್ವಾಗಾರ್ಡನ್ನು ನಮ್ಮ ಶಾಲೆಗೆ ನೀಡಿದ್ದಾರೆ.

ಈ ಒಂದು ಶುಭ ಕಾರ್ಯಕ್ರಮದಲ್ಲಿ ಚಾಪು ಮೂಡಿಸಿ ಸಹಕಾರ ನೀಡಿದ ನಮ್ಮ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಎನ್. ಮಂಜುಳಾ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲ ವಿದ್ಯಾರ್ಥಿಗಳಿಗೂ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಶಿಕ್ಷಕರೆಲ್ಲರನ್ನು ಕುರಿತು ಪ್ರಯೋಗಗಳನ್ನು ಚಾಲನೆ ಮಾಡುವಂತೆ ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಪ್ರಶಂಸೆ ವ್ಯಕ್ತಪಡಿಸಿದರು. ವಸ್ತುಗಳನ್ನು ನೀಡುವಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಪರಮಪೂಜ್ಯ ಸ್ವಾಮೀಜಿ ಅವರಿಗೆ ಶಾಲೆಯ ಪರವಾಗಿ ವೈಯಕ್ತಿಕವಾಗಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆಯನ್ನು ಸಲ್ಲಿಸುತ್ತಾ ಕೋಟಿ ನಮನಗಳನ್ನು ಪಾದಕಮಲಗಳಿಗೆ ಅರ್ಪಿಸುತ್ತೇನೆ.ಈ ಸಂದರ್ಭದಲ್ಲಿ ಜೆಎಸ್‌ಎಸ್ ಕಾಲೇಜು ಪ್ರಾಂಶುಪಾರು ಮಧುಕುಮಾರ್, ಬಾಲು, ಶಿಕ್ಷಣಾಧಿಕಾರಿಗಳು ಜಿ.ಎನ್. ಮಂಜುಳಾ ಇವರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಸರ್ಕಾರಿ ಹಿರಿಯ ಪ್ರಾಥಮಿಕ ವಾಣಿವಿಲಾಸ ಶಾಲೆಯ ಮುಖ್ಯ ಶಿಕ್ಷಕರು ಮಾತನಾಡಿ ಈ ಶಾಲೆಯ
ವಿದ್ಯಾರ್ಥಿಗಳಿಗೂ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಶಿಕ್ಷಕರೆಲ್ಲರನ್ನು ಕುರಿತು ಪ್ರಯೋಗಗಳನ್ನು ಚಾಲನೆ ಮಾಡುವಂತೆ ಸಮರ್ಪಕವಾಗಿ ಬಳಸಿಕೊಂಡು ಕಾರ್ಯನಿರ್ವಹಿಸುವಂತೆ ಪ್ರಶಂಸೆ ವ್ಯಕ್ತಪಡಿಸಿದರು. ವಸ್ತುಗಳನ್ನು ನೀಡುವಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲರಿಗೂ ಹಾಗೂ ವಿಶೇಷವಾಗಿ ಪರಮಪೂಜ್ಯ ಸ್ವಾಮೀಜಿ ಅವರಿಗೆ ಶಾಲೆಯ ಪರವಾಗಿ ವೈಯಕ್ತಿಕವಾಗಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕವಾದ ಅಭಿನಂದನೆ ಸಲ್ಲಿಸಿ ಕೋಟಿ ನಮನಗಳನ್ನು ಪಾದಕಮಲಗಳಿಗೆ ಅರ್ಪಿಸುತ್ತೇನೆ ಎಂದು ಶಾಲೆಯ ಮುಖ್ಯ ಶಿಕ್ಷಕರು ಎಂ.ಎಚ್. ಮೀನಾಕ್ಷಿ ಕೃತಜ್ಞತೆ ಸಲ್ಲಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page