Friday, January 24, 2025

ಸತ್ಯ | ನ್ಯಾಯ |ಧರ್ಮ

ಹಣಕಾಸು ವ್ಯವಾಹರ: ಯಕ್ಷಗಾನ ಕಲಾವಿದನ ಮೇಲೆ ಇನ್ನೊಂದು ಮೇಳದ ಕಲಾವಿದನಿಂದ ಹಲ್ಲೆ

ಹಣದ ವ್ಯವಹಾರಕ್ಕೆ ಸಂಬಧಿಸಿದಂತೆ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಬಲಾತ್ಕಾರವಾಗಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ

ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ಲು ಶ್ರೀಭಗವತಿ ಯಕ್ಣಗಾನ ಮೇಳದ ಕಲಾವಿದರಾಗಿರುವ ಇವರು, ಅವರ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್‌ ಎನ್ನುವವರಿಂದ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು.

ಆದರೆ ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲವೆನ್ನುವ ಕಾರಣಕ್ಕೆ ಸಚಿನ್, ತನ್ನ ಉದ್ಯಾವರದಲ್ಲಿರುವ ಮನೆಗೆ ಕರೆದುಕೊಂಡು ಹೋಗಿ, ಅಲ್ಲಿ ಮನೆಯಲ್ಲಿ ಬಲಾತ್ಕಾರವಾಗಿ ಕೂಡಿ ಹಾಕಿರುವುದಾಗಿ ನಿತಿನ್‌ ದೂರಿದ್ದಾರೆ.

ಅಲ್ಲಿ ಸಚಿನ್, ಆತನ ತಂದೆ ಕುಶಾಲ್ ಹಾಗೂ ಇನ್ನೊರ್ವ ಅಪರಿಚಿತ ವ್ಯಕ್ತಿ ಕೋಣಗಳಿಗೆ ಹೊಡೆಯುವ ಬೆತ್ತದಿಂದ ಬೆನ್ನಿಗೆ, ತಲೆಗೆ, ಕಾಲಿಗೆ ಹೊಡೆದುದಲ್ಲದೆ ಕೆನ್ನೆಗೆ ಹೊಡೆದು ಖಾಲಿ ಬಾಂಡ್ ಪೇಪರ್‌ ಮೇಲೆ ಬಲವಂತದಿಂದ ಸಹಿ ಪಡೆದುಕೊಂಡಿದ್ದಾರೆ ಎಂದು ದೂರಲಾಗಿದೆ.

ಹಲ್ಲೆಗೊಳಗಾದ ನಿತಿನ್ ಅದೇ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನದಲ್ಲಿ ಪಾಲ್ಗೊಂಡಿದ್ದು, ಬೆಳಿಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page