Friday, January 24, 2025

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರದ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರಿ ಸ್ಫೋಟ, ಐದು ಸಾವು!

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಾಜ್ಯದ ಭಂಡಾರ ಜಿಲ್ಲೆಯ ಜವಾಹರ್ ನಗರದಲ್ಲಿರುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು (ಜನವರಿ 24) ಭಾರಿ ಸ್ಫೋಟ ಸಂಭವಿಸಿದೆ.

ಈ ಘಟನೆಯಲ್ಲಿ ಸುಮಾರು ಐದು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ 10.30 ರ ಸುಮಾರಿಗೆ ಕಾರ್ಖಾನೆಯ ಆರ್‌ಕೆ ಶಾಖೆಯ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಸಂಜಯ್ ಕೋಲ್ಟೆ ತಿಳಿಸಿದ್ದಾರೆ.

ಆದರೆ, ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಛಾವಣಿ ಕುಸಿದಿದ್ದು, ಸುಮಾರು 5 ಕಿಲೋಮೀಟರ್‌ಗಳವರೆಗೆ ಶಬ್ದ ಕೇಳಿಬಂದಿದೆ ಎಂದು ಸ್ಥಳೀಯರು ಬಹಿರಂಗಪಡಿಸಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿತ್ತು. ಅಪಘಾತದ ಸಮಯದಲ್ಲಿ ಕಾರ್ಖಾನೆಯಲ್ಲಿ 12 ಜನರಿದ್ದರು ಎಂದು ತಿಳಿದುಬಂದಿದೆ, ಅವರಲ್ಲಿ ಇಬ್ಬರನ್ನು ರಕ್ಷಣಾ ತಂಡವು ರಕ್ಷಿಸಿದೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ. ಅಪಘಾತದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಆರ್ಡಿನೆನ್ಸ್ ಕಾರ್ಖಾನೆ ಸ್ಫೋಟ ಘಟನೆಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲ್, ಮೋದಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. https://x.com/ag_Journalist/status/1882687848685654216

Related Articles

ಇತ್ತೀಚಿನ ಸುದ್ದಿಗಳು

You cannot copy content of this page