ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು

ಬೆಂಗಳೂರು 25 – ಮೈಕ್ರೋ ಫೈನಾನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು ಮುಂದಿಟ್ಟಿದ್ದಾರೆನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ಸಾಲ ವಸೂಲಿಗೆ ಇಳಿಯುತ್ತಿರುವುದನ್ನು ನಿಯಂತ್ರಿಸಲು ಏನು ಮಾಡಿದ್ದೀರಿ? ಅಂಥಾ ಸಿಬ್ಬಂದಿ ವಿರುದ್ಧ ನಿಮ್ಮ ಸಂಸ್ಥೆಗಳಿಂದ ಏನು ಕ್ರಮ ಕೈಗೊಂಡಿದ್ದೀರಿ: ನೋಂದಣಿ ಆಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರನ್ನು ಖಾರವಾಗಿ ಪ್ರಶ್ನಿಸಿದ ಸಿ.ಎಂ ಸಿದ್ದರಾಮಯ್ಯ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ಮುಂದಿಟ್ಟ ಖಾರವಾದ ಪ್ರಶ್ನೆಗಳು

  1. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ?
  2. ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು?
  3. ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ?
  4. ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ?
  5. RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ?
  6. ಸಾಲಗಾರರಿಗೆ ಸಾಲ ಕೊಡುವ ಮೊದಲು ಆಧಾರ್ KYC ಮಾಡಿಸುತ್ತಿಲ್ಲ ಏಕೆ ? ಇದನ್ನು ಮಾಡಿಸಿದ್ದರೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುವುದು ತಪ್ಪುತ್ತಿತ್ತು.ನಿಮ್ಮ ವ್ಯವಹಾರ ಹೆಚ್ಚಿಸಿಕೊಳ್ಳಲು ನಿಯಮ ಮೀರಿ ಒಬ್ಬರೇ ಸಾಲಗಾರರಿಗೆ ಮೇಲಿಂದ ಮೇಲೆ ಸಾಲ ಕೊಡುತ್ತಿದ್ದೀರಿ. ಸಾಲ ತೀರಿಸಲು ಸಾಧ್ಯವಾಗದಿದ್ದಾಗ ನಿಯಮ ಬಾಹಿರ ಕ್ರಮಕ್ಕೆ ಮುಂದಾಗುತ್ತಿದ್ದೀರಿ. ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ.
  7. ಆರ್ ಬಿ ಐ ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಿದ ಮೈಕ್ರೋ ಫೈನಾನ್ಸ್ ಕಂಪನಿಗಳ ಪರವಾನಗಿ ರದ್ದುಗೊಳಿಸಲು ಏನು ಕ್ರಮ ಕೈಗೊಂಡಿದ್ದೀರಿ?: ಆರ್ ಬಿ ಐ ಅಧಿಕಾರಿಗಳಿಗೆ ಪ್ರಶ್ನಿಸಿದ ಸಿಎಂ.
  8. ಒಬ್ಬರೇ ಸಾಲಗಾರರು ಬೇರೆ ಬೇರೆ ಗುರಿತಿನ ಚೀಟಿ ( ಐ ಡಿ ಕಾರ್ಡ್ ಗಳು) ಕೊಟ್ಟು ಸಾಲ ಪಡೆದಿರುವುದು ನಿಮ್ಮ ದಾಖಲೆಗಳಲ್ಲಿದೆ. ಆದರೆ ಸಾಲಗಾರರು ಈ ರೀತಿ ದುರುಪಯೋಗ ಪಡಿಸಿಕೊಳ್ಳುವುದನ್ನು ತಪ್ಪಿಸಲು ಯಾವ ಪದ್ಧತಿ ಪಾಲಿಸುತ್ತಿದ್ದೀರಿ: ಕಂಪನಿಗಳಿಗೆ ಮುಖ್ಯಮಂತ್ರಿ ಕೇಳಿದರು.
  9. ಆರ್ ಬಿ ಐ ಪರವಾನಗಿ ಪಡೆದಿರುವ ಕಂಪನಿಗಳು ನಿಯಮಬಾಹಿರ ವಸೂಲಿಗೆ ಇಳಿದಿಲ್ಲ, ಆ ರೀತಿ ಮಾಡುತ್ತಿರುವುದು ಪರವಾನಗಿ ಇಲ್ಲದ ಕಂಪನಿಗಳು ಎನ್ನುವ ಉತ್ತರ ಮೈಕ್ರೋ ಕಂಪನಿಯವರಿಂದ ಬಂತು.]

ಇದಕ್ಕೆ ಸಚಿವ ಕೃಷ್ಣಬೈರೇಗೌಡರು, ಎಚ್.ಕೆ.ಪಾಟೀಲ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಕರಾರು ವ್ಯಕ್ತಪಡಿಸಿ, ಪರವಾನಗಿ ಇದ್ದವರೇ ಈ ರೀತಿ ಮಾಡುತ್ತಿದ್ದಾರೆ ಎನ್ನುವ ವರದಿ ನಮಗೆ ಗ್ರೌಂಡ್ ರಿಪೋರ್ಟ್ ನಲ್ಲಿ ಬಂದಿದೆ. ಆದ್ದರಿಂದ ಬಡ ಜನರ ಹಿತಕಾಯಲು ನಾವು ನಿಯಮ ಉಲ್ಲಂಘಿಸುವ ಕಂಪನಿ ಎಂ.ಡಿ ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಸಚಿವರು ಸಭೆಯಲ್ಲಿ‌ ಗುಡುಗಿದರು.

*ಮಹಿಳೆಯರ, ವೃದ್ಧರ ಮೇಲೆ ದಬ್ಬಾಳಿಕೆ ನಡೆಸಿರುವ ಪತ್ರಿಕಾ ವರದಿಗಳೂ ನಿತ್ಯ ಬರುತ್ತಿವೆ. ನಾನು ಇದನ್ನೆಲ್ಲಾ ಸಹಿಸುವುದಿಲ್ಲ. ನನ್ನ ಜನರ ರಕ್ಷಣೆಗೆ ನಾನು ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯಲ್ಲೇ ಕಠಿಣ ಎಚ್ಚರಿಕೆ ನೀಡಿದರು.

ವಿಷಯಗಳು: #india #kannada #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು