Friday, January 31, 2025

ಸತ್ಯ | ನ್ಯಾಯ |ಧರ್ಮ

ಜಮ್ಮು ಮತ್ತು ಕಾಶ್ಮೀರ: ಪೂಂಛ್‌ನಲ್ಲಿ ಇಬ್ಬರು ಶಂಕಿತ ಉಗ್ರರ ಹತ್ಯೆ 

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದ ನಂತರ ಗುರುವಾರ ರಾತ್ರಿ ಇಬ್ಬರು ಶಂಕಿತ ಉಗ್ರರನ್ನು ಹತ್ಯೆ ಮಾಡಲಾಗಿದೆ.

ಸೇನೆಯ ವೈಟ್ ನೈಟ್ ಕಾರ್ಪ್ಸ್ ಅವರು ಶಂಕಿತ ಉಗ್ರರ ಚಲನವಲನವನ್ನು ಪತ್ತೆಹಚ್ಚಿದ್ದಾರೆ ಮತ್ತು ತ್ವರಿತವಾಗಿ ಕ್ರಮ ತೆಗೆದುಕೊಂಡರು. ಆಪಾದಿತ ನುಸುಳುಕೋರರ ಜೊತೆಗೆ ತೀವ್ರ ಮತ್ತು ಭಾರೀ ಗುಂಡಿನ ಚಕಮಕಿ ನಡೆಯಿತು.

ರಾತ್ರಿಯಿಡೀ ಕಾರ್ಯಾಚರಣೆ ಮುಂದುವರಿದಿದ್ದು, ಇಬ್ಬರು ಶಂಕಿತ ಉಗ್ರರು ಹತರಾಗಿದ್ದಾರೆ ಎಂದು ಸೇನೆ ತಿಳಿಸಿದೆ. “ಇದುವರೆಗೆ ಈ ಪ್ರದೇಶದಲ್ಲಿ ನಡೆಸಿದ ಹುಡುಕಾಟದಿಂದ ಹಲವಾರು ಶಸ್ತ್ರಾಸ್ತ್ರಗಳು ಮತ್ತು ಯುದ್ಧ ಸಾಮಗ್ರಿಗಳನ್ನು ವಶ ಮಾಡಿಕೊಳ್ಳಲಾಗಿದೆ,” ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮುಂಜಾನೆ, ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ದೋಡಾ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದ್ದವು ಎಂದು ದಿ ಹಿಂದೂ ವರದಿ ಮಾಡಿದೆ. ಸ್ಥಳೀಯ ಪೊಲೀಸ್ ತಂಡಗಳು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ, ಉಗ್ರಗಾಮಿಗಳು ಎಂದು ನಂಬಲಾದ ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಚಲನವಲನದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ ನಂತರ ಪ್ರಾರಂಭವಾಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page