Saturday, February 1, 2025

ಸತ್ಯ | ನ್ಯಾಯ |ಧರ್ಮ

ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಸ್ವ-ಇಚ್ಛೆಯಿಂದ ಪ್ರಾಣ ಬಿಡುವ ಅವಕಾಶ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆ ಇಂದು (ಜ.31) ಮಹತ್ವದ ಆದೇಶವೊಂದನ್ನು ಹೊರಡಿಸಿದ್ದು, ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ, ಯಾವುದೇ ಚಿಕಿತ್ಸೆಯ ನಂತರವೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಸ್ವ-ಇಚ್ಛೆಯಿಂದ ಪ್ರಾಣ ಬಿಡುವ ಅವಕಾಶ ನೀಡಿದೆ

ಹೌದು, ಆರೋಗ್ಯದಲ್ಲಿ ಸುಧಾರಣೆ ಕಾಣಲು ಸಾಧ್ಯವೇ ಇಲ್ಲದ ಮಾರಣಾಂತಿಕ ಕಾಯಿಲೆಯಿಂದ ಬಳಲುವ ರೋಗಿಗಳ ದಯಾಮರಣಕ್ಕೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಈ ಮೊದಲೇ ಇಬ್ಬರು ವೈದ್ಯರ ಎರಡು ಮಂಡಳಿಗಳ ಸ್ಥಾಪನೆಗೆ ಆದೇಶಿಸಿದ್ದು ಆ ಮೂಲಕ ಸುಪ್ರೀಂಕೋರ್ಟ್ ನಿರ್ದೇಶನ ಜಾರಿ ಮಾಡಿದೆ.

ಈ ರೀತಿಯ ಪ್ರಕರಣಗಳಲ್ಲಿ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಯ ಕುಟುಂಬ ಸದಸ್ಯರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಲಿದೆ. ಇದಕ್ಕಾಗಿ ಎರಡು ಪ್ರತ್ಯೇಕ – ಪ್ರೈಮರಿ ಹಾಗೂ ಸೆಕೆಂಡರಿ ಎಂಬ ವೈದ್ಯರ ಸಮಿತಿ ಸ್ಥಾಪಿಸಲಾಗುತ್ತಿದೆ.

ಈ ಬೋರ್ಡ್ ದಯಾಮರಣಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಿ ವರದಿ ತಯಾರಿಸಿ ಕೋರ್ಟ್ ಮುಂದೆ ಹಾಜರು ಪಡಿಸುತ್ತದೆ. ಈ ವರದಿ ಆಧರಿಸಿ ಕೋರ್ಟ್ ಅನುಮತಿ ನೀಡಿದರೆ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ನ್ನು ವೈದ್ಯರು ತೆಗೆಯಬಹುದಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page