Monday, February 3, 2025

ಸತ್ಯ | ನ್ಯಾಯ |ಧರ್ಮ

ನನ್ನ ಮೇಲಿನ ದ್ವೇಷಕ್ಕಾಗಿ ರಾಜ್ಯ ಸರ್ಕಾರ ಕೈಗಾರಿಕೆಗಳ ಕತ್ತು ಹಿಸುಕುತ್ತಿದೆ: ಸಚಿವ ಕುಮಾರಸ್ವಾಮಿ

ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾಕರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್‌) ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್‌ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಂದ್ರ ಮಂತ್ರಿಯಾಗಿ 7 ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲ ಕಾರ್ಖಾನೆ, ಕಂಪೆನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ದೊಡ್ಡ ಮನಸ್ಸಿನಿಂದ ಪುರಸ್ಕರಿಸಿದ್ದಾರೆ. ಆದರೆ, ಕರ್ನಾಟಕಕ್ಕೆ ಇಂಥದ್ದು ಬೇಕು ಎಂದು ರಾಜ್ಯದಿಂದ ಯಾರೊಬ್ಬರೂ ನನ್ನ ಮುಂದೆ ಬಂದು ಚರ್ಚೆ ಮಾಡಿಲ್ಲ. ಸಚಿವನಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಾನು ಮೊದಲು ಸಹಿ ಹಾಕಿದ್ದೇ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ ಉಳಿಸಲು.

2011ರಲ್ಲಿ ಸಿದ್ದರಾಮಯ್ಯ ಸ್ಕಓಅರವೇ ಒಪ್ಪಿಗೆ ನೀಡಿದ್ದ ಸಂಡೂರಿನ ದೇವದಾರಿ ಗಣಿ ಯೋಜನೆ ಅನುಷ್ಠಾನಕ್ಕೆ ಹಣಕಾಸು ನೆರವು ಪಡೆಯಲು ಅನುಮತಿ ಕೊಡುವ ಬಗ್ಗೆ ನಾನು ಹಣಕಾಸು ಸಚಿವಾಲಯಕ್ಕೆ ಶಿಫಾರಸು ಮಾಡಿದೆ. ಅದನ್ನೇ ತಿರುಚಿ ಹೇಳಿದ ಕಾಂಗ್ರೆಸ್‌ ನಾಯಕರು, ನನ್ನ ಮೇಲಿನ ರಾಜಕೀಯ ಹಗೆತನದಿಂದ ಒಳ್ಳೆಯ ಪ್ರಯತ್ನಕ್ಕೆ ವ್ಯವಸ್ಥಿತವಾಗಿ ಅಡ್ಡಿಪಡಿಸಿದರು ಎಂದು ದೂರಿದರು.

ಎಚ್‌ಎಂಟಿಗೆ ಜೀವ ಕೊಡಲು ನಾನು ಹೊರಟರೆ, ಅದಕ್ಕೂ ರಾಜ್ಯ ಕಾಂಗ್ರೆಸ್‌ ಸರಕಾರ ಕೊಕ್ಕೆ ಹಾಕುತ್ತಿದೆ. ಅರಣ್ಯ ಇಲಾಖೆ ಭೂಮಿ ಅಂತ ಕಿತಾಪತಿ ಶುರು ಮಾಡಿದೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ, ಕೇವಲ ರಾಜಕೀಯ ಬೇಕಷ್ಟೇ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆ ಮುಚ್ಚಿ ಹೋಗಿದೆ. ಅದಕ್ಕೆ ಮರು ಜೀವ ಪ್ರಯತ್ನಕ್ಕೂ ಕೈ ಹಾಕಿದ್ದೇನೆ. ಅದಕ್ಕೆ ಈ ಕಾಂಗ್ರೆಸ್‌ ಸರಕಾರ ಎಷ್ಟರ ಮಟ್ಟಿಗೆ ಬೆಂಬಲ ಕೊಡುತ್ತೋ, ಬಿಡುತ್ತೋ ಗೊತ್ತಿಲ್ಲ ಎಂದರು.

ದೇವದಾರಿ ಗಣಿ ಯೋಜನೆಗೆ ರಾಜ್ಯ ಸರಕಾರ ಅಡ್ಡಿಪಡಿಸಿದ ಕಾರಣ ಮಂಗಳೂರಿನ ಕುದುರೆಮುಖ ಕಬ್ಬಿಣದ ಅದಿರು ಕಾರ್ಖಾನೆಯಲ್ಲಿ ನೂರಾರು ಕಾರ್ಮಿಕರು ಕೆಲಸ ಕಳೆದುಕೊಂಡರು. ಅವರೆಲ್ಲರೂ ನನ್ನಲ್ಲಿ ಬಂದು ದುಃಖ ತೋಡಿಕೊಂಡರು. ನನ್ನ ರಾಜ್ಯದ ಪ್ರತಿಷ್ಠಿತ ಕಾರ್ಖಾನೆಗೆ ಬೀಗ ಬೀಳಬಾರದು ಎಂಬ ಸದುದ್ದೇಶದಿಂದ ಕುದುರೆಮುಖ ಕಂಪನಿಯನ್ನು ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದಲ್ಲಿ ವಿಲೀನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯ ಸರಕಾರದ ರಾಜಕೀಯ ಪ್ರತಿಷ್ಠೆಯಿಂದ ಕೈಗಾರಿಕೆಗಳ ಕತ್ತು ಹಿಸುಕಲು ಪ್ರಯತ್ನ ಮಾಡುತ್ತಿದ್ದರೆ, ನರೇಂದ್ರ ಮೋದಿ ಸ್ಕಓಅರ ಅವುಗಳಿಗೆ ಜೀವ ತುಂಬುವ ಕೆಲಸ ಮಾಡುತ್ತಿದೆ ಎಂದು ಎಚ್‌ಡಿಕೆ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page