Tuesday, February 4, 2025

ಸತ್ಯ | ನ್ಯಾಯ |ಧರ್ಮ

ದೆಹಲಿ ಚುನಾವಣೆ | ಬಿಜೆಪಿ ತಾನು ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲೂ ಉಚಿತ ವಿದ್ಯುತ್‌ ನೀಡುತ್ತಿಲ್ಲ, ಅದರ ಪ್ರಣಾಳಿಕೆಯನ್ನು ನಂಬದಿರಿ: ಕೇಜ್ರಿವಾಲ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತೆ ಸರ್ಕಾರ ರಚಿಸಲಿದೆ ಎಂದು ಎಎಪಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

70 ವಿಧಾನಸಭಾ ಸ್ಥಾನಗಳಲ್ಲಿ 55 ಸ್ಥಾನಗಳನ್ನು ಗೆಲ್ಲುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ದಕ್ಷಿಣ ದೆಹಲಿಯ ಛತ್ತರ್‌ಪುರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಕೇಜ್ರಿವಾಲ್ ಮಾತನಾಡಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ನಗರದಲ್ಲಿನ ಎಲ್ಲಾ ಉಚಿತ ಯೋಜನೆಗಳನ್ನು ನಿಲ್ಲಿಸಲಿದೆ ಎಂದು ಅವರು ಹೇಳಿದರು.

ಬಿಜೆಪಿ 20 ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಮತ್ತು ಒಂದೇ ಒಂದು ರಾಜ್ಯವು 24 ಗಂಟೆಗಳ ವಿದ್ಯುತ್ ನೀಡುತ್ತಿಲ್ಲ ಎಂದು ಅವರು ಹೇಳಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮೊಹಲ್ಲಾ ಚಿಕಿತ್ಸಾಲಯಗಳನ್ನು ಮುಚ್ಚಲಾಗುವುದು ಎಂದು ಕಮಲ್ ನಾಥ್ ಹೇಳಿದ್ದಾರೆ ಎಂಬ ಆರೋಪಿಸಿದರು.

ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಸ್ಥಾನಗಳಿವೆ. ಫೆಬ್ರವರಿ 5 ರಂದು ಮತದಾನ ನಡೆಯಲಿದೆ. ಫೆಬ್ರವರಿ 8 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಎಎಪಿ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ಕೂಡ ಸ್ಪರ್ಧಿಸುತ್ತಿದೆ. ಆದರೆ, ಮತ್ತೊಮ್ಮೆ ಎಎಪಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಈ ಬಾರಿ ಬಿಜೆಪಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page