ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಾಸನ ಕೃಷಿ ಕಾಲೇಜನ್ನು ಬೆಂಗಳೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯಲ್ಲೇ ಉಳಿಸಿ – ಹೆಚ್.‌ಡಿ ರೇವಣ್ಣ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಹಾಸನ ಕೃಷಿ ಕಾಲೇಜನ್ನು ಬೆಂಗಳೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯಲ್ಲೇ ಉಳಿಸಿ – ಹೆಚ್.‌ಡಿ ರೇವಣ್ಣ

ಹಾಸನ: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಸನ ಕೃಷಿ ಕಾಲೇಜನ್ನು ಬೆಂಗಳೂರು ವಿಶ್ವ ವಿದ್ಯಾನಿಲಯದ ವ್ಯಾಪ್ತಿಯಲ್ಲೇ ಉಳಿಸಬೇಕು ಈ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಆಗ್ರಹಿಸಿದರು.

       ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದೊಂದಿಗೆ ಮಾತಾಡಿದ ಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ವಿಶ್ವ ವಿದ್ಯಾಲಯದ ಅಡಿಯಲ್ಲಿ  ಕೃಷಿ ಕಾಲೇಜು ಇರುವುದರಿಂದ ವಿಧ್ಯಾರ್ಥಿಗಳಿಗೆ ಅನುಕೂಲ ಆಗಲಿವೆ. ಆದುದರಿಂದ ಜಿಲ್ಲೆಯ ಜೆಡಿಎಸ್ ನನಾಲ್ವರು ಶಾಸಕರು ಮುಖ್ಯಮಂತ್ರಿ ಸೇರಿ ಸಂಭಂದಿಸಿದ ಇಲಾಖೆ ಸಚಿವರು ಹಾಗೂ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದರು. ಹಾಸನ ಕೃಷಿ ಕಾಲೇಜು ಬೆಂಗಳೂರು ವಿಶ್ವ ವಿದ್ಯಾಲಯದ ವ್ಯಾಪ್ತಿಯಲ್ಲಿ ಇರುವುದರಿಂದ ವಿದ್ಯಾರ್ಥಿಗಳ ಓಡಾಟಕ್ಕೆ ಅನುಕೂಲ ಆಗಲಿದೆ, ಪ್ರತಿಷ್ಟಿತ ವಿಶ್ವ ವಿದ್ಯಾನಿಲಯವಾಗಿ ಗುರುತಿಸಿಕೊಂಡಿರುವ ಬೆಂಗಳೂರು ವಿವಿ ಯನ್ನು ವಿಭಾಗ ಮಾಡುವ ಕೆಲಸ ಮಾಡಬಾರದು, ಶಾಸಕರಾದ ಸುರೇಶ್, ಮಂಜು ಅವರಿಗೂ ಪತ್ರ ಬರೆಯಲು ಹೇಳುವೆ ಎಂದರು ಇದನ್ನು ರಾಜಕೀಯವಾಗಿ ತೆಗೆದುಕೊಂಡರೆ ಇದರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಹಾಸನದ ಸೋಮನಹಳ್ಳಿ ಕಾವಲು ಜಾಗದಲ್ಲಿ 250 ಎಕರೆ ಜಾಗದಲ್ಲಿ ತೋಟಗಾರಿಕೆ ವಿವಿ ಮಾಡಲು ಹೊರಟಾಗ ಅದಕ್ಕೂ ಅಡ್ಡಿ ಪಡಿಸಿದರು. ಒಂದು ವೇಳೆ ಮಂಡ್ಯ ಯುನಿವರ್ಸಿಟಿಗೆ ಸೇರಿಸಿದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಬೇಕಾದರೆ ಮಂಡ್ಯದಲ್ಲಿ ಹೊಸ ಕಾಲೇಜು ಮಾಡಲಿ. ಯಡಿಯೂರಪ್ಪ ಅವರು ಶಿವಮೊಗ್ಗಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸಿದ್ದರು. ಅಧಿವೇಶನದಲ್ಲಿ ಹೋರಾಟ ಮಾಡಿ ಹಾಸನದಲ್ಲಿ ಉಳಿಸಿದ್ದೇನೆ. ಇದಲ್ಲದೆ ಹಾಸನದಲ್ಲಿ ೭೬೦ ಅಂಗನವಾಡಿ ಹುದ್ದೆಗಳು ಖಾಲಿ ಇವೆ, ಜಿಲ್ಲಾಡಳಿತ ಸಂದರ್ಶನ ಹಾಗೂ ನೇಮಕಾತಿಗೆ ಅವಕಾಶ ನೀಡುತ್ತಿಲ್ಲ, ಹೋರ ಗುತ್ತಿಗೆ ನೌಕರರಿಗೆ, ಬೋಧಕ ಬೋಧಕೇತರ ಸಿಬ್ಬಂದಿಗಳು, ಸೇರಿದಂತೆ ಹಲವರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ ಎಂದು ದೂರಿದರು.

     ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷರಿಗೆ ತಿಂಗಳಿಗೆ 25 ಸಾವಿರ ಹಾಗೂ ಜಿಲ್ಲಾಧ್ಯಕ್ಷರಿಗೆ 50 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ, ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದ್ದೆ ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್ ಶಾಸಕರು, ಕಾರ್ಯಕರ್ತರಿಗೆ ಡಿಸಿಎಂ ಡಿಕೆಶಿ ಆಫರ್ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಈ ದುಸ್ಥಿತಿ ಬಂದಿದೆ ಎಂದು ವ್ಯಂಗ್ಯವಾಗಿ ಮಾತನಾಡಿದ ರೇವಣ್ಣನವರು, ಇನ್ನೊಬ್ಬರ ಮನೆ ಬಾಗಿಲಿಗೆ ಬಂದು ಕರೆಯುವ ಸ್ಥಿತಿ ಬಂದಿದೆ. ಬೇರೆ ಸಮಯದಲ್ಲಿ ದೇವೇಗೌಡರು, ಕುಮಾರಣ್ಣನ ಕಾಲು ಹಿಡಿಯುತ್ತಾರೆ. ಕಾಂಗ್ರೆಸ್ 136 ಸೀಟ್ ಗೆದ್ದು, ಗ್ಯಾರೆಂಟಿನು ಕೊಟ್ಟು ಎಲ್ಲಿ, ಯಾವಾಗ ಸರ್ಕಾರ ಏನಾಗುತ್ತೋ ಅಂಥಾ ಬೇರೆಯವರನ್ನು ಕರೆಯುವ ಸ್ಥಿತಿ ಬಂದಿದೆ. ಇವಕ್ಕೆಲ್ಲ ಹೆದರಲ್ಲ ಟೈಂ ಬರುತ್ತೆ, ಗೊತ್ತಿದೆ ನನಗೆ. ದೇವೇಗೌಡರ ಕಣ್ಮುಂದೆ ಏನೇನ್ ನಡೆಯುತ್ತೆ ನೋಡೋಣ ಎಂದು ಹೇಳಿದರು.

ವಿಷಯಗಳು: #karnataka #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು