Wednesday, February 19, 2025

ಸತ್ಯ | ನ್ಯಾಯ |ಧರ್ಮ

ಹುಲಿ ಮೃತದೇಹ ಪತ್ತೆ; ಸೂಕ್ತ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಶಿವಮೊಗ್ಗ ಜಿಲ್ಲೆಯ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ಸಂಜೆ 7-8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾದ ವರದಿಯ ಬೆನ್ನಲ್ಲೇ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.

ಹುಲಿ ಸಾವಿನ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಹುಲಿ ಮೈಮೇಲೆ ಗುಂಡು ತಗುಲಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಧ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವ ಸಚಿವರು, ಈ ಬಗ್ಗೆ ತನಿಖೆ ನಡೆಸಿ 10 ದಿನಗಳ ಒಳಗಾಗಿ ವಾಸ್ತವ ವರದಿ ಸಲ್ಲಿಸಲು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಹುಲಿಯ ಮೃತ ದೇಹ ಪತ್ತೆಯಾಗಿರುವ ಪ್ರದೇಶದಲ್ಲಿ ಯಾವತ್ತೂ ಹುಲಿ ಯಾವತ್ತೂ ಕಂಡಿದ್ದೇ ಇಲ್ಲ. ಹೀಗಿರುವಾಗ ಬೇರೆ ಕಡೆ ಹುಲಿ ಕೊಂದು ಇಲ್ಲಿ ಹಾಕಿರಬಹುದು ಎಂಬ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆಯೂ ತನಿಖೆ ನಡೆಸಲು ಸೂಚಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page