Wednesday, February 26, 2025

ಸತ್ಯ | ನ್ಯಾಯ |ಧರ್ಮ

ಮಂಗನ ಖಾಯಿಲೆ (KFD)ಗೆ ರಾಜ್ಯದಲ್ಲಿ ಮೊದಲ ಬಲಿ

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೊನೇರಿಪುರ ಗ್ರಾಮದ 54 ವರ್ಷದ ಮಹಿಳೆಯೊಬ್ಬರು ಮೃತರಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.

ಮೃತ ಮಹಿಳೆ ಹಲವು ದಿನಗಳಿಂದ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸೋಂಕಿನಿಂದ ಬಳಲುತ್ತಿದ್ದರು. ಚಿಕಿತ್ಸೆ ಬಳಿಕ ಜ.23ರಂದು ಮಹಿಳೆಗೆ ಕೆಎಫ್‌ಡಿ ಪಾಸಿಟಿವ್‌ ಎಂಬುದು ದೃಢಪಟ್ಟಿತ್ತು.

ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಸುಧಾರಣೆ ಕಾಣದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಜ.29ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕೆಎಫ್‌ಡಿ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆ ಫೆ.5ರಂದು ಪುನಃ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸಂದಿಸದೇ ಮಹಿಳೆ ಮೃತಪಟ್ಟಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page