Friday, February 28, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದ ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ – ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಾದ್ಯಂತ ಇನ್ನು ಮುಂದೆ ಹೋಟೆಲ್‌ ರೆಸ್ಟೋರೆಂಟ್‌, ಉಪಾಹಾರ ಗೃಹಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಘೋಷಣೆ ಮಾಡಿದ್ದಾರೆ.ಬೆಂಗಳೂರಿನ ವಿವಿಧೆಡೆಗಳಿಂದ ಸಂಗ್ರಹಿಸಲಾಗಿದ್ದ ಇಡ್ಲಿ ಮಾದರಿಗಳು ಪ್ರಯೋಗಾಲಯ ಪರೀಕ್ಷೆಯಲ್ಲಿ ಅಸುರಕ್ಷಿತ ಎಂಬುದು ದೃಢಪಟ್ಟ ಬೆನ್ನಲ್ಲೇ ಸಚಿವ ದಿನೇಶ್‌ ಗುಂಡೂರಾವ್‌ ಈ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇಡ್ಲಿ ತಯಾರಿಸಲು ಪ್ಲಾಸ್ಟಿಕ್‌ ಹಾಳೆಗಳನ್ನು ಬಳಸಲಾಗುತ್ತಿದ್ದು, ಅದರಿಂದಾಗಿ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹೋಟೆಲ್‌, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಲಾಗುತ್ತಿದೆ ಎಂದರುಹೋಟೆಲ್‌, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಕವರ್‌ ಬಳಸುವಂತಿಲ್ಲ. ಇನ್ನು ಮುಂದೆ ಆಹಾರ ತಯಾರಿಕೆ, ವಿತರಣೆ ವೇಳೆ ಪ್ಲಾಸ್ಟಿಕ್‌ ಬಳಸಬಾರದು ಎಂದು ಗುಂಡೂರಾವ್‌ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page