Monday, March 3, 2025

ಸತ್ಯ | ನ್ಯಾಯ |ಧರ್ಮ

ಬಜೆಟ್‌ ಭಾಷಣದಲ್ಲಿ ಗ್ಯಾರಂಟಿ ಯೋಜನೆಗಳ ಪರ ಬ್ಯಾಟ್‌ ಬೀಸಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ 

ಬೆಂಗಳೂರು: ವಿಧಾನಮಂಡಲ ಪ್ರಸಕ್ತ ವರ್ಷದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರ ಬ್ಯಾಟ್‌ ಬೀಸಿದ್ದಾರೆ.ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಗ್ಯಾರಂಟಿಯಿಂದ ಸರ್ಕಾರ ದಿವಾಳಿ ಎಂದಿದ್ದರು. ಆದರೆ ಸರ್ಕಾರದ ವಿರುದ್ಧ ನುಡಿದ ಭವಿಷ್ಯ ಸುಳ್ಳಾಗಿದೆ. ಈ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಗ್ಯಾರಂಟಿ ಜಾರಿಯಿಂದ ಬಡವರಿಗೆ ಅನುಕೂಲವಾಗಿದೆ. ರಾಜ್ಯದ ಆದಾಯವೂ ಹೆಚ್ಚುತ್ತಿದೆ. ರಾಜ್ಯದ ಅಭಿವೃದ್ಧಿಯ ವೇಗ ಚುರುಕುಗೊಳಿಸಿದೆ ಎಂದು ಹೇಳಿದರು.

ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವೃದ್ಧಿಯಾಗುತ್ತಿದೆ. ಉತ್ತಮ ಮಳೆ ಆಗಿದ್ದರಿಂದ ಉತ್ತಮ ಬೆಳೆಯೂ ಆಗಿದೆ. ಪ್ರತಿಯೊಂದು ವಲಯದಲ್ಲೂ ಉತ್ತಮವಾದ ಸಾಧನೆಯಾಗುತ್ತಿದೆ. ಜಿಎಸ್‌ಟಿ ಸಂಗ್ರಹದಲ್ಲೂ ಸರ್ಕಾರ ಮುಂಚೂಣಿಯಲ್ಲಿದೆ. ರೈತರ ಆತ್ಮಹತ್ಯೆ ಗಣನೀಯ ಇಳಿಕೆ ಕಂಡಿದೆ. ಕೆಎಂಎಫ್‌ನಿಂದ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page