ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ|| ಮನಮೋಹನ್‌ ಸಿಂಗ್‌ ಹೆಸರು: ಕನ್ನಡಪರ ಹೋರಾಟಗಾರರಿಂದ ವಿರೋಧ

PPeepal Media

Peepal Media ರಾಜ್ಯ

• 2 ನಿಮಿಷದ ಓದು

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ|| ಮನಮೋಹನ್‌ ಸಿಂಗ್‌ ಹೆಸರು: ಕನ್ನಡಪರ ಹೋರಾಟಗಾರರಿಂದ ವಿರೋಧ

ಬೆಂಗಳೂರು: ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.

ಆದರೆ ಈ ವಿಷಯವಾಗಿ ಈಗಾಗಲೇ ಸಾಮಾಜಿಕ ಮಾಧ್ಯಮಗಳಲ್ಲಿ ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೆಸರು ಬದಲಾವಣೆಯ ಅಗತ್ಯವನ್ನು ಪ್ರಶ್ನಿಸಿರುವ ಹೋರಾಟಗಾರರು, ಹಾಗೊಂದು ಬದಲಾವಣೆ ಮಾಡುವುದೇ ಆದರೆ ಸ್ಥಳೀಯ ರಾಜಕಾರಣಿಗಳು ಅಥವಾ ಇತರರ ಹೆಸರಿಡುವಂತೆ ಒತ್ತಾಯಿಸುತ್ತಿದ್ದಾರೆ.

ಸರ್ಕಾರ ಈ ಕುರಿತು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ಉಳಿದಂತೆ ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು.

ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು.

ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸಲಾಗುವುದು ಎಂದು ಘೋಷಿಸಿದ್ದಾರೆ.

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.

ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.

ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡಲಾಗುವುದು.

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸಲಾಗುವುದು.

KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಮ್ಮ ಬಜೆಟ್‌ ಭಾಷಣದ ವೇಳೆ ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು