ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ; ಸಿನೆಮಾ ಟಿಕೆಟ್‌ ದರವನ್ನು 200 ರೂಪಾಯಿಗೆ ಸೀಮಿತಗೊಳಿಸಿದ ಸರ್ಕಾರ! ಮಲ್ಟಿಫ್ಲೆಕ್ಸುಗಳಿಗೂ ಅನ್ವಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸಿನಿಮಾ ಪ್ರಿಯರಿಗೆ ಸಿಹಿ ಸುದ್ದಿ; ಸಿನೆಮಾ ಟಿಕೆಟ್‌ ದರವನ್ನು 200 ರೂಪಾಯಿಗೆ ಸೀಮಿತಗೊಳಿಸಿದ ಸರ್ಕಾರ! ಮಲ್ಟಿಫ್ಲೆಕ್ಸುಗಳಿಗೂ ಅನ್ವಯ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಂದಾಜು 500 ಕೋಟಿ ವೆಚ್ಚದಲ್ಲಿ ಮುಂದಿನ ವರ್ಷ 150 ಎಕರೆ ಜಮೀನಿನಲ್ಲಿ ಚಿತ್ರನಗರಿಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.

ವಿಧಾನಸೌಧದಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ 500 ಕೋಟಿ ವೆಚ್ಚದಲ್ಲಿ ಚಿತ್ರನಗರಿಯನ್ನು ಮೈಸೂರಿನಲ್ಲಿ ಪ್ರಾರಂಭಿಸಲು 150 ಎಕರೆ ಜಮೀನು ಕಾಯ್ದಿರಿಸಲಾಗಿದೆ. ಮುಂದಿನ ವರ್ಷ ಕಾರ್ಯಾರಂಭ ಮಾಡಲಾಗುವುದು. ಇದಕ್ಕೆ ನಮ್ಮ ಸರ್ಕಾರವು ಬದ್ಧವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮಲ್ಟಿಪ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಪ್ರವೇಶ ದರವನ್ನು 200 ರೂ.ಗೆ ಸೀಮಿತಗೊಳಿಸುವುದಾಗಿ ತಿಳಿಸಿದ್ದಾರೆ. ಸಿನಿಮಾ ಕ್ಷೇತ್ರವನ್ನು ಉದ್ಯಮವೆಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ಒದಗಿಸಲಾಗುವ ಸೌಲಭ್ಯವನ್ನು ಈ ಕ್ಷೇತ್ರಕ್ಕೂ ಒದಗಿಸಲಾಗುವುದು.

ಬೆಂಗಳೂರಿನ ನಂದಿನಿಲೇಔಟ್‌ನಲ್ಲಿ ಚಲನಚಿತ್ರ ಅಕಾಡೆಮಿ ಹೊಂದಿರುವ 2.5 ಎಕರೆ ನಿವೇಶನದಲ್ಲಿ ಬಹುಪರದೆಗಳಿರುವ ಚಿತ್ರಮಂದಿರಗಳ ಸಮುಚ್ಚಯವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಾಗಿ ಆಶ್ವಾಸನೆ ನೀಡಿದ್ದಾರೆ.

ಸಾಮಾಜಿಕ, ಚಾರಿತ್ರಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್‌ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು ಚಲನಚಿತ್ರ ಭಂಡಾರ ಸ್ಥಾಪನೆ ಮಾಡುವುದಾಗಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಕನ್ನಡಚಿತ್ರಗಳ ಪ್ರೋತ್ಸಾಹಕ್ಕೆ ಒಟಿಟಿ ವೇದಿಕೆಯನ್ನು ಸೃಜಿಸಲು ಕ್ರಮ ಕೈಗೊಳ್ಳುವ ಆಶ್ವಾಸನೆಯನ್ನು ನೀಡಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು