ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪಾಯಕಾರಿ ದೆಹಲಿ ಗಾಳಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕ್ಕೆ – ಸುಪ್ರೀಂ ಕೋರ್ಟ್ ಕಡಕ್ ಸೂಚನೆಕರ್ರೆಗುಟ್ಟಾ ಬೆಟ್ಟದಲ್ಲಿ ಸ್ಫೋಟಕ ಪತ್ತೆ: 711 BGL ಶೆಲ್‌ಗಳು ವಶಕ್ಕೆಸ್ಟಿಂಗ್ ಕೇಂದ್ರಿತ ರಾಜಕಾರಣದ ಹಿಂದಿರುವ ಸಂಚು ವಂಚನೆಗಳ ಅನಾವರಣಸ್ಟಿಂಗ್ ಆಪರೇಷನ್ ನಲ್ಲಿ ಕುಮಾರಸ್ವಾಮಿ‌‌ ಪ್ರಯತ್ನ ಸಂಪೂರ್ಣ ವಿಫಲ – ಶಿವರಾಜ್ ಎಸ್. ತಂಗಡಗಿಕರ್ನಾಟಕದ ಪೆಟ್ರೋಲ್‌ನಲ್ಲಿ 31.2% ಎಥೆನಾಲ್! ವಾಹನ ಸವಾರರಿಗೆ ಆತಂಕ; E20 ಪ್ರಚಾರದ ಜಾಹೀರಾತುಗಳ ಹಿಂದಿನ ಹುನ್ನಾರವೇನು?ಬಯಲು ಸಂತೆಯ ಮೌನ – 3 : ಮೂರು ದಾರಿಯ ಖತ್ರಿಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ: 4 ಬೋಗಿಗಳಿಗೆ ಹಾನಿ, ಪ್ರಯಾಣಿಕರು ಸುರಕ್ಷಿತಪಂಜಾಬ್‌ನಲ್ಲಿ ಕರ್ಮಭೂಮಿ ಎಕ್ಸ್‌ಪ್ರೆಸ್‌ನ ನಾಲ್ಕು ಬೋಗಿಗಳಿಗೆ ಬೆಂಕಿ: ಪ್ರಯಾಣಿಕರು ಸುರಕ್ಷಿತ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಟೀಸರ್ ವಿರುದ್ಧ ಆಕ್ರೋಶ: ಕೋಮು ಸಾಮರಸ್ಯಕ್ಕೆ ಧಕ್ಕೆ ಆರೋಪ, ಸಿನೆಮಾ ಬಿಡುಗಡೆ ಮಾಡದಂತೆ ಒತ್ತಾಯಗೃಹಲಕ್ಷ್ಮೀ ಫಲಾನುಭವಿಗಳ ಜೊತೆ ಡಿಕೆಶಿ ಸಂವಾದ – ಯೋಜನೆ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲರಾಜ್ಯದ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗಾಗಿ 20,000 ಕೋಟಿ ರೂ –  ಈಶ್ವರ ಖಂಡ್ರೆಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಮತಪತ್ರಗಳ ಬಳಕೆ – ಸಚಿವ ಈಶ್ವರ ಖಂಡ್ರೆKSRTC ಬಸ್ ಪಾಸ್ ದರವೂ ಭಾರಿ ಏರಿಕೆ – ಶೇಕಡಾ 23 ರಷ್ಟು ಏರಿಕೆಅಪರಾಧಗಳ ರಾಜಧಾನಿಯಾಗುತ್ತಿದೆಯೇ ಬೆಂಗಳೂರು?ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ಗೆ ಇನ್ನು ಕಾನೂನು ರಕ್ಷಣೆ ಇಲ್ಲವೇ? ನಿಮ್ಮ ಒಂದು ಪೋಸ್ಟ್‌ಗೆ ಕಂಪನಿಗಳೇ ಹೊಣೆ!ಕುವೆಂಪು ಚಿಂತನೆಗಳು ಇಂದು: ವಿಷಯ ಮಂಡನೆ ಮತ್ತು ಸಂವಾದಹಿರಿಯ ಸಾಹಿತಿ, ಭಾಷಾಶಾಸ್ತ್ರಜ್ಞ ಪ್ರೊ. ಕೆ.ವಿ. ನಾರಾಯಣ ಇನ್ನಿಲ್ಲಒಂದೇ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ನಂದಿಬೆಟ್ಟದ ತಪ್ಪಲಿನಲ್ಲಿ ಬಾಲಕನ ಮೃತದೇಹ ಪತ್ತೆ‘ಕನ್ನಡಿಗರಿಗೆ ಉದ್ಯೋಗ ಕೊಡಿ, ಕಂಪನಿಗಳಿಗೆ ಕಿರುಕುಳ ಕೊಡಬೇಡಿ’: ಸರಕಾರದ ಇಬ್ಬಗೆ ನೀತಿ & ಅಸಲಿ ಪರಿಹಾರ

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಅಪಘಾತ; ಗಂಭೀರ ಗಾಯ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಅಪಘಾತ; ಗಂಭೀರ ಗಾಯ

ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಮುಗಿಸಿಕೊಂಡು ಹಾವೇರಿ ಜಿಲ್ಲೆಯ ಕುಮಾರಪಟ್ಟಣಂ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಬೈಕ್‌ ಬಂದು ಗುದ್ದಿದ ರಭಸಕ್ಕೆ ರುದ್ರಪ್ಪ ಮಾನಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದ ಪರಿಣಾಮ ಅವರ ಹಣೆ, ಹಲ್ಲು ಹಾಗೂ ಬಲ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ತಕ್ಷಣವೇ ಉಪ ಸಭಾಪತಿಗಳಿಗೆ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಎಸ್‌ಎಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಅಪಘಾತದ ನಂತರ ಬೈಕ್ ಸವಾರ, ಬೈಕ್‌ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಹಾಗೂ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ ಆನಂದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಕ್‌ ಸವಾರನಿಗಾಗಿ ಶೋಧ ನಡೆಸಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು