ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ – ಈಶ್ವರ ಖಂಡ್ರೆ ಸೂಚನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ – ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ಅಕ್ರಮ ಮರ ಕಡಿತಲೆಗೆ ಪ್ರಸಕ್ತ ವಿಧಿಸಲಾಗುತ್ತಿರುವ ದಂಡ ಮತ್ತು ಶಿಕ್ಷೆಯ ಪ್ರಮಾಣವನ್ನು ಹತ್ತುಪಟ್ಟು ಹೆಚ್ಚಿಸಲು ಅನುವಾಗುವಂತೆ ವೃಕ್ಷ ಸಂರಕ್ಷಣಾ ಕಾಯಿದೆ 1972ಕ್ಕೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.ತತ್ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಿಗೆ ಸೂಚನೆ ನೀಡಿರುವ ಸಚಿವರು, “ದೊಡ್ಡ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು, ಮಾನವ ಹತ್ಯೆ ಮಾಡಿದಂತೆ ಅಥವಾ ಅದಕ್ಕಿಂತ” ಎಂದು ಘನ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.

ಅಕ್ರಮವಾಗಿ ಕತ್ತರಿಸಿದ ಪ್ರತಿ ಮರಕ್ಕೆ 1 ಲಕ್ಷ ರೂ. ದಂಡ ವಿಧಿಸಿರುವ ವಿಚಾರದಲ್ಲಿ ಕರುಣೆ ತೋರುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿರುವುದನ್ನೂ ತಮ್ಮ ಟಿಪ್ಪಣಿಯಲ್ಲಿ ಉಲ್ಲೇಖಿಸಿರುವ ಸಚಿವರು, ಅಕ್ರಮ ಮರಗಳ ಕಡಿತಲೆಗೆ ವಿಧಿಸುವ ದಂಡದ ಪ್ರಮಾಣ ಹೆಚ್ಚಳದ ಅಗತ್ಯ ಪ್ರತಿಪಾದಿಸಿದ್ದಾರೆ.ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಸವಾಲುಗಳನ್ನು ಇಡೀ ವಿಶ್ವ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಇರುವ ಒಂದೇ ಭೂಮಿಯನ್ನು ರಕ್ಷಿಸಿ, ಸುರಕ್ಷಿತವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಲು, ಪ್ರಕೃತಿ, ಪರಿಸರ ಉಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದೂ ತಿಳಿಸಿದ್ದಾರೆ.

ಸಂಸ್ಕೃತದಲ್ಲಿ “ಧರ್ಮೋ ರಕ್ಷತಿ ರಕ್ಷಿತಃ’ ಎಂಬ ಮಾತಿದೆ. ಈಗ ಇದನ್ನು “ವೃಕ್ಷೋ ರಕ್ಷತಿ ರಕ್ಷಿತಃ’ ಎಂದು ಬದಲಾಯಿಸಿಕೊಳ್ಳಬೇಕಾದ ಕಾಲಘಟ್ಟದಲ್ಲಿ ನಾವಿದ್ದೇವೆ. ಹತ್ತಾರು, ನೂರಾರು ವರ್ಷದಿಂದ ಬೆಳೆದ ಮರಗಳನ್ನು ಸಂರಕ್ಷಿಸದಿದ್ದರೆ ಮುಂದೆ ದೊಡ್ಡ ಅಪಾಯ ಎದುರಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ವೃಕ್ಷ ಸಂರಕ್ಷಣಾ ಕಾಯಿದೆಗೆ ತಿದ್ದುಪಡಿ ತರಲು ಕ್ರಮ ವಹಿಸುವಂತೆ ಆದೇಶ ನೀಡಿದ್ದಾರೆ.

ವಿಷಯಗಳು: #karnataka #news #peepal #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು