Tuesday, April 15, 2025

ಸತ್ಯ | ನ್ಯಾಯ |ಧರ್ಮ

ಮೋದಿ ಸರ್ಕಾರದ ಅಂಬೇಡ್ಕರ್ ಅವರ ಮೇಲಿನ ಗೌರವ ಕೇವಲ ಮಾತುಗಳಿಗೆ ಮಾತ್ರ ಸೀಮಿತ: ಖರ್ಗೆ

ದೆಹಲಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶ ಮೋದಿ ಸರ್ಕಾರಕ್ಕೆ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನ ಶಿಲ್ಪಿಯ ಶತ್ರುಗಳು ಎಂದು ಅವರು ಹೇಳಿದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆ ಮೋದಿ ಸರ್ಕಾರ ಹೊಂದಿರುವ ಗೌರವ ಮಾತುಗಳಿಗೆ ಸೀಮಿತವಾಗಿದೆ. ಅವರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುವ ಉದ್ದೇಶ ಅವರಿಗೆ ಇಲ್ಲ. ಇಂತವರು ಅಂಬೇಡ್ಕರ್ ಪರಂಪರೆಯ ಬಗ್ಗೆ ಮಾತನಾಡುತ್ತಿದ್ದಾರೆ.

1952ರ ಚುನಾವಣೆಯಲ್ಲಿ ಅಂಬೇಡ್ಕರ್ ಅವರ ಸೋಲಿಗೆ ಎಸ್.ಎ. ಡಾಂಗೆ ಮತ್ತು ವಿ.ಡಿ. ಸಾವರ್ಕರ್ ಕಾರಣರು. “ಅಂಬೇಡ್ಕರ್ ಅವರು ಪತ್ರದಲ್ಲಿ ಇದನ್ನು ಉಲ್ಲೇಖಿಸಿದ್ದಾರೆ” ಎಂದು ಖರ್ಗೆ ಹೇಳಿದ್ದಾರೆ. ದೇಶಾದ್ಯಂತ ಜಾತಿ ಜನಗಣತಿಯ ಅಗತ್ಯವನ್ನು ಖರ್ಗೆ ಒತ್ತಿ ಹೇಳಿದರು. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿ ಜಾರಿಗೆ ತರಬೇಕು ಎಂದು ಹೇಳಿದರು.

“ಸಂವಿಧಾನ ನಾಗರಿಕರಿಗೆ ಅಂಬೇಡ್ಕರ್ ನೀಡಿದ ಕೊಡುಗೆಯಾಗಿದೆ. ಇದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯದ ಹಕ್ಕನ್ನು ಒದಗಿಸುತ್ತದೆ. ಎಐಸಿಸಿ ಸಭೆಯಲ್ಲಿ ಹಂಚಿಕೊಂಡ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಅಭಿಪ್ರಾಯಗಳನ್ನು ನಾವು ಮುಂದಕ್ಕೆ ಕೊಂಡುಹೋಗುತ್ತಿದ್ದೇವೆ” ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page