Saturday, April 19, 2025

ಸತ್ಯ | ನ್ಯಾಯ |ಧರ್ಮ

ಕಟ್ಟಡ ಕುಸಿತ: ನಾಲ್ವರು ಸಾವು, ಅವಶೇಷಗಳಡಿ ಸಿಲುಕಿದ ಹಲವರು

ದೆಹಲಿ: ರಾಷ್ಟ್ರ ರಾಜಧಾನಿ ಹೊಸದೆಹಲಿಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರಂತ ಘಟನೆ ದೆಹಲಿ ನಗರದ ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದಿದೆ.

ಇಂದು ಮುಂಜಾನೆ ಮುಸ್ತಫಾಬಾದ್ ಪ್ರದೇಶದಲ್ಲಿ ಕಟ್ಟಡವೊಂದು ಕುಸಿದಿದೆ. ಘಟನೆಯಿಂದ ಎಚ್ಚೆತ್ತ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎನ್‌ಡಿಆರ್‌ಎಫ್ ತಂಡಗಳು ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡವು. ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಶೇಷಗಳ ಅಡಿಯಲ್ಲಿ ಅನೇಕ ಕಾರ್ಮಿಕರು ಸಿಲುಕಿಕೊಂಡಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಅವರನ್ನು ರಕ್ಷಿಸಲು ರಕ್ಷಣಾ ತಂಡಗಳು ಶ್ರಮಿಸುತ್ತಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಶುಕ್ರವಾರ ಸಂಜೆ ದೆಹಲಿಯ ಹವಾಮಾನ ಇದ್ದಕ್ಕಿದ್ದಂತೆ ಬದಲಾಗಿದ್ದು, ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಈ ಸಮಯದಲ್ಲಿ ಕಟ್ಟಡ ಕುಸಿದಿರಬಹುದು ಎಂದು ಸ್ಥಳೀಯರು ಹೇಳುತ್ತಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page