Tuesday, April 22, 2025

ಸತ್ಯ | ನ್ಯಾಯ |ಧರ್ಮ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ; ಶಿವಮೊಗ್ಗ ಮೂಲದ ಒಬ್ಬರು ಸೇರಿ 27 ಮಂದಿ ಸಾ*ವು

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕ್ ಮೂಲದ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವ ಸೇರಿದಂತೆ 27 ಮಂದಿ ದುರ್ಮರಣ ಹೊಂದಿದ್ದಾರೆ.

ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ಟ್ರಕಿಂಗ್ ಗೆ ಹೋಗಿದ್ದ ಪ್ರವಾಸಿಗರ ಮೇಲೆ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಬೇರೆ ಬೇರೆ ರಾಜ್ಯದ ಹಲವರು ಸೇರಿದಂತೆ ತಕ್ಷಣಕ್ಕೆ ಸಿಕ್ಕ ಮಾಹಿತಿಯಂತೆ ಶಿವಮೊಗ್ಗ ಮೂಲದ ಮಂಜುನಾಥ್ ಎಂಬುವರು ಮೃತಪಟ್ಟಿದ್ದಾರೆ.

ಮೃತ ಮಂಜುನಾಥ್ ರಿಯಲ್‌ಎಸ್ಟೇಟ್ ಉದ್ಯಮಿ ಎಂದು ಹೇಳಲಾಗಿದೆ. ಪತ್ನಿ ಎದುರೇ ಮಂಜುನಾಥ್ ರಕ್ತದ ಮಡುವಿನಲ್ಲಿ ನರಳಿ ಪ್ರಾಣಬಿಟ್ಟಿದ್ದಾರೆ. ಮಂಜುನಾಥ್ ಪತ್ನಿ ಪಲ್ಲವಿ ಹಾಗೂ ಮಗ ಸುರಕ್ಷಿತವಾಗಿದ್ದು, ಘಟನೆಯಲ್ಲಿ ಅಭಿಜ್ಞಾರಾವ್‌ ಎನ್ನುವವರಿಗೆ ಗಾಯಗಳಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ವರದಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page