ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆಗಳ ಆಲಿಸಿ – ಜಿಲ್ಲಾಧಿಕಾರಿ ಸತ್ಯಭಾಮ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 2 ನಿಮಿಷದ ಓದು

ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆಗಳ ಆಲಿಸಿ – ಜಿಲ್ಲಾಧಿಕಾರಿ ಸತ್ಯಭಾಮ

ಹಾಸನ : ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರ ಕುಂದುಕೊರತೆಗಳ ಆಲಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ನಿಷ್ಠೆಯಿಂದ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಅಲೆಮಾರಿ, ಅರೆ ಅಲೆಮಾರಿಗಳ ಕುಂದು ಕೊರತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾನೂನು ಚೌಕಟ್ಟಿನಲ್ಲಿ ಸಾಧ್ಯವಿರುವುದನ್ನು ಕಲ್ಪಿಸಲು ಮೊದಲ ಆದ್ಯತೆ ನೀಡಿ ಬದ್ದತೆಯಿಂದ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಆಲಿಸಲು ಎಲ್ಲಾ ತಾಲ್ಲೂಕುಗಳಲ್ಲಿ ಸಭೆ ನಡೆಸುವಂತೆ ತಹಶೀಲ್ದಾರ್‌ಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಹಣವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾ ವಹಿಸುವಂತೆ ನಿರ್ದೇಶನ ನೀಡಿದರು.ಸರ್ಕಾರಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ಕರೆಯುವ ಸಂದರ್ಭದಲ್ಲಿ ಸಂಬAದಪಟ್ಟ ಇಲಾಖೆ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಇರುವ ಮೀಸಲಾತಿಗಾಗಿ ಸರ್ಕಾರಿ ಆದೇಶ ಪಾಲಿಸುವಂತೆ ತಿಳಿಸಿದರು. ಹಾಸನ ನಗರದ ಹುಣಸಿನಕೆರೆ ಬಳಿಯಲ್ಲಿ ಗೃಹ ಭಾಗ್ಯ ಯೋಜನೆಯಡಿ ನಿರ್ಮಾಣ ಮಾಡಿರುವ ಪೌರಕಾರ್ಮಿಕರ ಮನೆಗಳ ದುರಸ್ಥಿ ಹಾಗೂ ಸಕಲೇಶಪುರದ ಕುಶಾಲನಗರದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯಿಂದ ನಿರ್ಮಿಸಿರುವ ಮನೆಗಳನ್ನು ದುರಸ್ಥಿ ಕಾರ್ಯವನ್ನು ಒಂದು ತಿಂಗಳಲ್ಲಿ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಂದಿ ಜೋಗಿ ಸಮುದಾಯಕ್ಕೆ ಮೀಸಲಿಟ್ಟಿರುವ ಮೂರು ಎಕರೆ ಪ್ರದೇಶದಲ್ಲಿ ಎಕರೆ ನಿವೇಶನ ಹಂಚಿಕೆಯಾಗಿದೆ ಉಳಿದ ಒಂದು ಎಕರೆ ಪ್ರದೇಶದಲ್ಲಿ ಇತರರು ಶೇಡ್ ನಿರ್ಮಾಣ ಮಾಡಿ ಬಾಡಿಗೆ ನೀಡಿದ್ದಾರೆ.ಇದನ್ನು ತೆರವುಗೊಳಿಸಿ ಸಮುದಾಯದ ಭವನ ಹಾಗೂ ಅಂಗನವಾಡಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪರಿಶೀಲಿಸಲು ತಹಸೀಲ್ದಾರ್ ಅವರಿಗೆ ಸೂಚನೆ ನೀಡಿದರು.ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಸಾಮಾಜಿಕ ಕಳಕಳಿಯಿಂದ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. 53,57, ರಲ್ಲಿ ಅರ್ಜಿ ಸಲ್ಲಿಸಿದ್ದಾರೆ ಮಂಜೂರು ಮಾಡಲು ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.


ಚೆಸ್ಕಾಂ ಅಧಿಕಾರಿಗಳು ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಮನ್ವಯತೆ ಯಿಂದ ಕರ್ತವ್ಯ ನಿರ್ವಹಿಸಿ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಒಂದು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.ಸಾರ್ವಜನಿಕ ಆಸ್ಪತ್ರೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ಬಿ.ಪಿ.ಎಲ್ ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರದ ಆದೇಶವಿದೆ ಈ ನಿಟ್ಟಿನಲ್ಲಿ ಅದನ್ನು ಪಾಲಿಸಲು ತಿಳಿಸದ ಜಿಲ್ಲಾಧಿಕಾರಿಯವರು ತುರ್ತಾಗಿ ಅಂಬುಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು. ಹಿಮ್ಸ್ನಲ್ಲಿ ಅತ್ಯಾಧುನಿಕ ಯಂತ್ರಗಳಿವೆ ಅವುಗಳ ಬಳಕೆ ಆಗಬೇಕು ಎಂದರು. ಸಭೆಯಲ್ಲಿ ಹಾಜರಿದ್ದ ಸಮುದಾಯದವರ ಮನವಿ ಮೇರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯನ್ನು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರ ಮಾಡುವಂತೆ ಸೂಚಿಸಿದರು.
ಸದರಿ ಸಭೆಯಲ್ಲಿ ಸಲ್ಲಿಕೆಯಾಗಿರುವ 165 ಅರ್ಜಿಗಳು ಪರಿಶೀಲಿಸಿ ಕೈಗೊಂಡಿರುವ ಪರಿಹಾರ ಬಗ್ಗೆ ಮುಂದಿನ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಬೇಕು ಎಂದರು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬರುವ ಸಮಸ್ಯೆಗಳನ್ನು ಬಗೆಹರಿಸಲು ಕ್ರಮವಹಿಸಲಾಗುವುದು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ ಅವರು ಮಾತನಾಡಿ ಪ್ರತಿ ಮಾಹೆ ಪೊಲೀಸ್ ಇಲಾಖೆ ವತಿಯಿಂದ ನಡೆಸುವ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ದೂರುಗಳು ಬರುವುದರಿಂದ ಕಂದಾಯ ಇಲಾಖೆಯ ಸಿಬ್ಬಂದಿಯವರು ಭಾಗವಹಿಸಿದರೆ ಅನುಕೂಲವಾಗುತ್ತದೆ ಎಂದರು. ಸಂದೇಶ್, ಅಂಬುಗ ಮಲ್ಲೇಶ್, ಆರ್.ಪಿ.ಸತೀಶ್, ಹೆತ್ತೂರು ನಾಗರಾಜ್, ವಿಜಯಕುಮಾರ್ ಮತ್ತಿತರ ಮುಖಂಡರು ಸಭೆಯಲ್ಲಿ ಹಕ್ಕು ಪತ್ರ, ಚರಂಡಿ, ರಸ್ತೆ, ಮನೆ ಮಂಜೂರಾತಿ, ಒತ್ತುವರಿ, ನಿವೇಶನ, ಜಮೀನು ಮಂಜೂರಾತಿ ಮತ್ತಿತರ ಸಮಸ್ಯೆಗಳ ಕುರಿತು ಸಭೆಯ ಗಮನಕ್ಕೆ ತಂದರು.ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಸಮುದಾಯದ ಮುಖಂಡರು ಹಾಜರಿದ್ದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು