Thursday, April 24, 2025

ಸತ್ಯ | ನ್ಯಾಯ |ಧರ್ಮ

ಅಣ್ಣಾವ್ರ ಹುಟ್ಟುಹಬ್ಬದ ಸ್ಮರಣೆ ; ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ವರನಟ ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಕರೆಯಲಾಗಿದೆ. ನಟಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಗೌರವಾರ್ಥ ಈ ಸಭೆಯನ್ನು ಅವರ ಹುಟ್ಟು ಜಿಲ್ಲೆಯಲ್ಲಿ ನಡೆಸಲಾಗುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವ ಸಂಪುಟ ಸಭೆಯ ಸಭಾಂಗಣದ ಪಕ್ಕದಲ್ಲಿ ಸಿದ್ಧಪಡಿಸಿರುವ ಮಾಧ್ಯಮಗೋಷ್ಠಿ ಸ್ಥಳದಲ್ಲಿ ರಾಜಕುಮಾರ್ ಅವರ ಫೋಟೋ ಇಟ್ಟು ಪುಷ್ಪಾಲಂಕಾರ ಮಾಡಲಾಗಿದೆ. ಈ ಮೂಲಕ ಜನ್ಮದಿನದ ಅಂಗವಾಗಿ ವರನಟನನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ.

ಇನ್ನು ಜಿಲ್ಲೆಯ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಚಾಮರಾಜನಗರ ಸೇರಿದಂತೆ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

ಡಾ.ರಾಜ್ ಕುಮಾರ್ ಅವರು ಚಾಮರಾಜನಗರ ಜಿಲ್ಲೆಯವರೇ ಆಗಿದ್ದರಿಂದ ಚಾಮರಾಜನಗರದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಈ ವಿಶೇಷ ಗೌರವ ನಮನ ಸಲ್ಲಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page