Thursday, April 24, 2025

ಸತ್ಯ | ನ್ಯಾಯ |ಧರ್ಮ

ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್‌ರವರ ಅಂತ್ಯಕ್ರಿಯೆ

ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ಅಟ್ಟಹಾಸಕ್ಕೆ ಕರುನಾಡಿನ ಇಬ್ಬರು ಬಲಿಯಾಗಿದ್ದರು. ಇಂದು ಅವರ ಪಾರ್ಥಿವ ಶರೀರ ಅವರವರ ಮನೆಗೆ ತಲುಪಿದ್ದು ಕುಟುಂಬಸ್ಥರು ಮಾತ್ರವಲ್ಲದೆ ರಾಜ್ಯದ ಜನರೂ ಕಂಬನಿ ಮಿಡಿದಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ನಗರದ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ನೆರವೇರಿದ್ದು, ಇತ್ತ ಬೆಂಗಳೂರು ಮೂಲದ ಭರತ್ ಭೂಷಣ ಅವರ ಅಂತ್ಯಕ್ರಿಯೆ ಕೂಡ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ನೆರವೇರಿತು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನ ನಡೆಯಿತು.

ಭರತ್ ಅಂತ್ಯಸಂಸ್ಕಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದಂತ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್ ಸೇರಿದಂತೆ ಹಲವು ಗಣ್ಯರು  ಪಾಲ್ಗೊಂಡು ಅಂತಿಮ ದರ್ಶನ ಪಡೆದರು. ಇದೇ ವೇಳೆ ನೆರೆದಿದ್ದ  ಜನರು ಭಯೋತ್ಪಾದಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page