Tuesday, April 29, 2025

ಸತ್ಯ | ನ್ಯಾಯ |ಧರ್ಮ

ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಸ್ಪೋಕನ್‌ ಇಂಗ್ಲಿಷ್‌ ತರಗತಿಗಳ ಪ್ರಾರಂಭ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಇದೇ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಸ್ಪೋಕನ್‌ ಇಂಗ್ಲಿಷ್‌ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ.

ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪೂರ್ಣ ಪ್ರಮಾಣದಲ್ಲಿ ಸ್ಪೋಕನ್‌ ಇಂಗ್ಲಿಷ್‌ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಇಲಾಖೆ ಅತ್ಯುತ್ತಮ ಸಂಪನ್ಮೂಲ ವ್ಯವಸ್ಥೆ ಜಾರಿಗೆ ಯೋಜನೆ ರೂಪಿಸಿದೆ.

ಇಲಾಖೆ ಕಳೆದ ವರ್ಷ ವಾರಂತ್ಯದಲ್ಲಿ ಸ್ಪೋಕನ್‌ ಇಂಗ್ಲಿಷ್‌ ತರಗತಿಗಳನ್ನು ನಡೆಸುವುದಕ್ಕೆ ಚಾಲನೆ ನೀಡಿತ್ತು. ರೀಜನಲ್‌ ಇನ್ಸ್ಟಿಟ್ಯೂಟ್‌ ಆಫ್‌ ಇಂಗ್ಲಿಷ್‌ ಸಂಸ್ಥೆ ಬೋಧಕರಿಗೆ ರಾಜ್ಯ ಮಟ್ಟದ ತರಬೇತಿ ನೀಡಲು ಸೂಚಿಸಿತ್ತು. ಆದರೆ ಈ ಕಾರ್ಯಕ್ರಮ ಜಾರಿಯಾಗಲೇ ಇಲ್ಲ.

ಇದೀಗ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷತಾ ಇಲಾಖೆ ಈ ವಿಷಯದ ಬಗ್ಗೆ ಎಚ್ಚೆತ್ತು ಈ ವರ್ಷ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಲು ಮುಂದಾಗಿದೆ. ಯೋಜನೆಯ ಪ್ರಕಾರ ವರ್ಷಕ್ಕೆ 180 ಗಂಟೆಗಳ ಕಾಲ ಸ್ಪೋಕನ್‌ ಇಂಗ್ಲಿಷ್‌ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ಈ ಯೋಜನೆ ಸುಮಾರು 1000 ಶಾಲೆಗಳಲ್ಲಿ ಜಾರಿಗೆ ಬರಲಿದೆ ಎನ್ನಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page