Wednesday, April 30, 2025

ಸತ್ಯ | ನ್ಯಾಯ |ಧರ್ಮ

ಬಾಲ್ಯವಿವಾಹ : ಚಾಮರಾಜನಗರದಲ್ಲಿ ಮತ್ತೊಂದು ಪ್ರಕರಣದಲ್ಲಿ ಎಂಟು ಮಂದಿ ವಿರುದ್ದ ದೂರು ದಾಖಲು

ಚಾಮರಾಜನಗರ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಮಹಿಳಾ ಪೊಲೀಸರು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 15 ವರ್ಷದ ಬಾಲಕಿಯನ್ನು 27 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿಸಿದ ಸಂಬಂಧ ಈ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಸಹಾಯವಾಣಿ 1098ಕ್ಕೆ ದೂರು ಬಂದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಏಪ್ರಿಲ್ 30 ರಂದು ವಿಶೇಷ ದಿನವಾಗಿರುವ ಹಿನ್ನೆಲೆಯಲ್ಲಿ ಈ ದಿನವೂ ಸಹ ಬಾಲ್ಯ ವಿವಾಹ ನಡೆಯಬಹುದು ಎಂದು ಊಹಿಸಲಾಗಿದೆ. ಅಕಸ್ಮಾತ್ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ 1098 ಅಥವಾ ಪೊಲೀಸ್‌ ಸಹಾಯವಾಣಿ 112ಕ್ಕೆ ಇಲ್ಲವೇ ಸಂಬಂಧಪಟ್ಟ ಹತ್ತಿರದ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಬಹುದು ಎಂದು ಜಿಲ್ಲಾ ಆಡಳಿತ ತಿಳಿಸಿದೆ.

“ಬಾಲ್ಯ ವಿವಾಹವು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಅಂತಹ ಸಂದರ್ಭಗಳಲ್ಲಿ, ಪೋಷಕರು, ಸಂಬಂಧಿಕರು, ಪುರೋಹಿತರು ಮತ್ತು ಮದುವೆಗೆ ಸಹಾಯ ಮಾಡುವ ಅಥವಾ ಭಾಗವಹಿಸುವ ಯಾರನ್ನಾದರೂ ತಪ್ಪಿತಸ್ಥರೆಂದು ಪರಿಗಣಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬಹುದು” ಎಂದು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಹೇಳಿದ್ದಾರೆ. ಈ ಕಾನೂನಿನ ಅಡಿಯಲ್ಲಿ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶ ನೀಡುತ್ತದೆ ಎಂದು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page