Friday, May 9, 2025

ಸತ್ಯ | ನ್ಯಾಯ |ಧರ್ಮ

ಯುದ್ಧ ಭೀತಿ: ಭಾರತದಲ್ಲಿ ಎಟಿಎಂಗಳು ಬಂದ್‌ ಆಗುತ್ತವೆಯೇ?

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತದಲ್ಲಿ ಎಟಿಎಂಗಳು 3 ದಿನಗಳವರೆಗೆ ಬಂದ್‌ ಆಗುತ್ತವೆ ಎಂಬ ವದಂತಿ ಹರಡುತ್ತಿದೆ. ಆದರೆ, ಈ ಮಾಹಿತಿಯನ್ನು ಭಾರತ ಸರ್ಕಾರದ ಗೃಹ ಸಚಿವಾಲಯ ತಳ್ಳಿ ಹಾಕಿದೆ.

ಭಾರತ ಸರ್ಕಾರವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾಗರೀಕರಿಗೆ ದಾಳಿ ಮತ್ತು ಮುಷ್ಕರಗಳಂತಹ ತುರ್ತು ಪರಿಸ್ಥಿತಿಗಳಿಗೆ ಸಿದ್ಧರಾಗಲು ತರಬೇತಿ ನೀಡಲಾಗುತ್ತಿದೆ. ಈ ಬೆನ್ನಲ್ಲೆ ಎಟಿಎಂಗಳು ಬಂದ್‌ ಆಗುತ್ತವೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಸೈಬರ್ ದಾಳಿಯ ನಂತರ ಸರ್ಕಾರವು ಕೆಲವು ದಿನಗಳವರೆಗೆ ಎಟಿಎಂಗಳನ್ನು ಮುಚ್ಚಲಿದೆ. ಆನ್‌ಲೈನ್‌ ವಹಿವಾಟಿಗೂ ಅಡಚಣೆಯಾಗಲಿದೆ ಎಂದು ವ್ಯಾಟ್ಸಪ್‌ ಫೇಸ್‌ಬುಕ್‌ ಟ್ವೀಟರ್‌ಗಳಲ್ಲಿ ಸಂದೇಶ ಹರಿದಾಡುತ್ತಿತ್ತು.

ಆದರೆ, “ಎಟಿಎಂಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಪಾಕಿಸ್ತಾನವು ತಪ್ಪು ಮಾಹಿತಿಯನ್ನು ಹರಡುವ ಮೂಲಕ ಭಾರತದಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಸಾರ್ವಜನಿಕರು ನಂಬಬಾರದು ” ಎಂದು ಕೇಂದ್ರ ಸರ್ಕಾರ ತಿಳಿಸಿದೆ.

  • ಇಂಡಿಯಾ VS ಪಾಕಿಸ್ತಾನ ಇಂಪಾರ್ಟೆಂಟ್ ಎಂದು ವಾಟ್ಸಾಪ್ ಸಂದೇಶವು ಪ್ರಾರಂಭವಾಗುತ್ತದೆ. ” ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಸೈಬರ್ ದಾಳಿಯಿಂದಾಗಿ ಭಾರತದಾದ್ಯಂತ ಎಟಿಎಂಗಳನ್ನು ಮುಚ್ಚಲಾಗುವುದು “.
  • “ಮುಂದಿನ 2 – 3 ದಿನಗಳವರೆಗೆ ಎಟಿಎಂಗಳನ್ನು ಮುಚ್ಚಲಾಗುವುದು “
  • “ಸೈಬರ್‌ ದಾಳಿ ಸಾಧ್ಯತೆ ಇದೆ ಯುದ್ಧದ ವೇಳೆ ಆನ್‌ಲೈನ್ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಿ”
  • ಎಂಬ ಮೇಸೆಜ್‌ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
  • ಆದರೆ ಇದು ಸುಳ್ಳು ಸುದ್ದಿ ಭಾರತದಾದ್ಯಂತ ಎಟಿಎಂಗಳನ್ನು ಮುಚ್ಚಲಾಗುತ್ತದೆ ಎಂಬ ಸುದ್ದಿಯನ್ನು ಪಿಐಬಿಯ ಸತ್ಯ – ಪರಿಶೀಲನಾ ಘಟಕವು ಕೂಡ ಪರಿಶೀಲನೆ ನಡೆದಿದೆ. ಇದೊಂದು ನಕಲಿ ಸುದ್ದಿ ನಂಬ ಬೇಡಿ ಎಂದು ಪಿಐಬಿ ಜನರಿಗೆ ತಿಳಿಸಿದೆ. ಇವುಗಳ ಜತೆಗೆ ಐಎನ್‌ಎಸ್‌ ವಿಕ್ರಾಂತ್‌, ಎಸ್‌ 400 ಕುರಿತ ಹಲವು ನಕಲಿ ವಿಡಿಯೋಗಳು ಕೂಡ ಹರಿದಾಡುತ್ತಿವೆ. ಅವುಗಳನ್ನು ನಂಬಬೇಡಿ ಎಂದು ಪಿಐಬಿ

Related Articles

ಇತ್ತೀಚಿನ ಸುದ್ದಿಗಳು

You cannot copy content of this page