Thursday, May 15, 2025

ಸತ್ಯ | ನ್ಯಾಯ |ಧರ್ಮ

ಗ್ರೇಟರ್ ಬೆಂಗಳೂರು ಇಂದಿನಿಂದ ಜಾರಿ; ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು,ಮೇ 15 : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ

ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page