Saturday, May 24, 2025

ಸತ್ಯ | ನ್ಯಾಯ |ಧರ್ಮ

ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾ*ರ ; ಮತ್ತು ಬರಿಸುವ ಔಷಧಿ ನೀಡಿ ಕೃತ್ಯ ಎಸಗಿದ ದುಷ್ಟರು

ಸ್ನೇಹಿತರ ಜೊತೆ ಸಿನಿಮಾ ನೋಡಲು ಹೋದ ಸಂದರ್ಭದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಅತ್ಯಾಚಾರ ಸಂತ್ರಸ್ತೆ ಕರ್ನಾಟಕದ ಬೆಳಗಾವಿಯ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದಾರೆ. ಕಳೆದ ಮಂಗಳವಾರವೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಯುವತಿಗೆ ಪಾನೀಯದಲ್ಲಿ ನಿದ್ರೆ ಮಾತ್ರೆ ಹಾಕಿ ಕುಡಿಸಿದ ಬಳಿಕ ಆಕೆಯ ಸ್ನೇಹಿತರೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಬೆಳಗ್ಗೆ ಎದ್ದ ಬಳಿಕ ಅತ್ಯಾಚಾರ ಆಗಿದ್ದರ ಬಗ್ಗೆ ಯುವತಿಗೆ ತಿಳಿದಿದೆ. ಕೂಡಲೇ ಯುವತಿ ಕುಟುಂಬಸ್ಥರ ಗಮನಕ್ಕೆ ತಂದಿದ್ದಾಳೆ. ನಂತರ, ಸಾಂಗ್ಲಿಯ ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮೂವರನ್ನ ಬಂಧಿಸಿದ್ದಾರೆ. ಸೊಲ್ಲಾಪುರದ ವಿನಯ್ ಪಾಟೀಲ್ (22), ಪುಣೆಯ ಸರ್ವಜ್ಞ ಗಾಯಕವಾಡ (22), ಸಾಂಗ್ಲಿಯ ತನ್ಮಯ್ ಪೇಡ್ನೆಕರ್ (21) ಬಂಧಿತರು. ಪೊಲೀಸರು ಆರೋಪಿಗಳನ್ನು ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ವಿಶ್ರಾಂಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page