Tuesday, May 27, 2025

ಸತ್ಯ | ನ್ಯಾಯ |ಧರ್ಮ

ದಕ್ಷಿಣ ಕನ್ನಡದಲ್ಲಿ ಮತ್ತೆ ಹರಿದ ನೆತ್ತರು; ಬಂಟ್ವಾಳದಲ್ಲಿ ಮಾರಕಾಸ್ತ್ರಗಳಿಂದ ಯುವಕನ ಹತ್ಯೆ

ದಕ್ಷಿಣ ಕನ್ನಡದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಮರೆಯುವ ಮುನ್ನವೇ ಮತ್ತೊಂದು ಭೀಕರ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಿದ್ದು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಈ ಘಟನೆ ನಡೆದಿದೆ‌.

ಕೊಳತ್ತಮಜಲು ನಿವಾಸಿ ಪಿಕಪ್ ವಾಹನ ಚಾಲಕನ ಸೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದ್ದಾರೆ.

ಚಾಲಕ ರಹೀಮ್ ಮರಳು ಅನ್ಲೋಡ್ ಮಾಡುತ್ತಿದ್ದಾಗ ದಾಳಿ ಮಾಡಿದ್ದಾರೆ ಬೈಕ್ ನಲ್ಲಿ ಬಂದಿದ್ದ ಇಬ್ಬರಿಂದ ತಲ್ವಾರ್ ನಿಂದ ರಹೀಮ್ ಮೇಲೆ ದಾಳಿ ನಡೆದಿದೆ. ರಹೀಮ್ ಜೊತೆಗಿದ್ದ ಹನೀಫ್ ಮೇಲೂ ದಾಳಿ ಮಾಡಿದ್ದು ಗಂಭೀರ ಗಾಯಗಳಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page