Wednesday, June 11, 2025

ಸತ್ಯ | ನ್ಯಾಯ |ಧರ್ಮ

ಹೈಕಮಾಂಡ್ ಸೂಚನೆಯಂತೆ ರಾಜ್ಯದಲ್ಲಿ ಜಾತಿ ಗಣತಿಗೆ ಮತ್ತೆ ಚಾಲನೆ: ಸಿಎಂ ಸಿದ್ದರಾಮಯ್ಯ

ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆಗಿನ ಮಹತ್ವದ ಸಭೆಯಲ್ಲಿ ಜಾತಿಗಣತಿ ಬಗ್ಗೆ ಚರ್ಚೆ ನಡೆದಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗಾಗಲೇ ಜಾತಿಗಣತಿ ನಡೆದು 9 ರಿಂದ 10 ವರ್ಷ ಕಳೆದಿದೆ. ಹೀಗಾಗಿ ಈಗ ಜಾತಿಗಣತಿ ನಡೆಸುವುದು ಸೂಕ್ತ ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್​ ಸಿಂಗ್​ ಸುರ್ಜೇವಾಲ ಅವರನ್ನು ಒಳಗೊಂಡ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಾತಿ ಜಾತಿಗಣತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಜಾತಿಗಣತಿ ವರದಿ ವಿಚಾರವಾಗಿ ಜೂನ್​ 12 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಜಾತಿಗಣತಿಯಲ್ಲಿ ಅಂಕಿ-ಸಂಖ್ಯೆಗಳನ್ನು ಪುನರ್​ ಪರಿಶೀಲಿಸುವಂತೆ ಸೂಚನೆ ನೀಡಿದ್ದೇವೆ. ಈ ವಿಚಾರಗಳನ್ನು ಬಿಟ್ಟು ಬೇರೆ ಯಾವುದೇ ವಿಚಾರವನ್ನು ಚರ್ಚೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page