Thursday, June 19, 2025

ಸತ್ಯ | ನ್ಯಾಯ |ಧರ್ಮ

ಬಮುಲ್ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್ ಆಯ್ಕೆ

ಬಮುಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅಧಿಕಾರ ಸ್ವೀಕರಿಸಿದ್ದಾರೆ. ಬೆಂಗಳೂರಿನ ಡೇರಿ ವೃತ್ತದಲ್ಲಿರುವ ಮುಖ್ಯ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿ, ಅಧಿಕಾರ ಸ್ವೀಕರಿಸಿದ್ದಾರೆ.

ಇಂದು ಬೆಂಗಳೂರಿನ ಡೈರಿ ಸರ್ಕಲ್ನಲ್ಲಿ ಬಮೂಲ್ನ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.

ನಮ್ಮ ಹೈನುಗಾರರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಈ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಹಾಗೂ ಆಶೀರ್ವಾದವಿರಲಿ. ನಾವೆಲ್ಲರೂ ಸೇರಿ ಕ್ಷೀರೋದ್ಯಮದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರೋಣ ಎಂದು ಡಿಕೆ ಸುರೇಶ್ ಟ್ವೀಟ್ ಮಾಡಿದ್ದಾರೆ.

ಕೆಎಂಎಫ್ ಅಧ್ಯಕ್ಷಗಿರಿಗೆ ಡಿಕೆ ಸುರೇಶ್ ಕಣ್ಣಿಟ್ಟಿದ್ದು ಬಮುಲ್ ಅಧ್ಯಕ್ಷಗಿರಿ ಅದಕ್ಕೊಂದು ಮೆಟ್ಟಿಲಿನಂತಾಗಿದೆ. ಮೇ 25 ರಂದು ಬಮೂಲ್ ನಿರ್ದೇಶಕರ ಚುನಾವಣೆ ನಡೆದಿತ್ತು. ಬಮೂಲ್​ನಲ್ಲಿ ಕಾಂಗ್ರೆಸ್ ಹೆಚ್ಚು ನಿರ್ದೇಶಕ ಸ್ಥಾನ ಹೊಂದಿದೆ. ಈ ನಿಟ್ಟಿನಲ್ಲಿ ಬಹುತೇಕ ಡಿಕೆ ಸುರೇಶ್ ಬಮೂಲ್ ಅಧ್ಯಕ್ಷ ಸ್ಥಾನ ಫಿಕ್ಸ್ ಎನ್ನುವಂತಾಗಿತ್ತು. ಇದೀಗ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page