ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐಟಿ ಸೇರಿದಂತೆ ಔದ್ಯೋಗಿಕ ಕ್ಷೇತ್ರದಲ್ಲಿ ಕೆಲಸದ ಅವಧಿ ವಿಸ್ತರಣೆ ಇಲ್ಲ: ಸಂತೋಷ್ ಲಾಡ್

ಐಟಿ ಸೇರಿದಂತೆ ಔದ್ಯೋಗಿಕ ಕ್ಷೇತ್ರದಲ್ಲಿ ಕೆಲಸದ ಅವಧಿ ವಿಸ್ತರಣೆ ಇಲ್ಲ: ಸಂತೋಷ್ ಲಾಡ್

ಐಟಿ ಕಂಪನಿಗಳನ್ನೂ ಒಳಗೊಂಡಂತೆ ಕೆಲವು ಆಯ್ದ ಔದ್ಯೋಗಿಕ ಕ್ಷೇತ್ರಗಳಲ್ಲಿ ಕೆಲಸದ ಅವಧಿಯನ್ನು 9 ರಿಂದ 10 ಗಂಟೆ ಅವಧಿಗೆ ವಿಸ್ತರಿಸಿದ ಬಗ್ಗೆ ಕಳೆದ ಕೆಲವು ದಿನಗಳಿಂದ ಎದ್ದ ಚರ್ಚೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದಾರೆ. ಸಧ್ಯಕ್ಕೆ ಕೆಲಸದ ಅವಧಿ ವಿಸ್ತರಣೆ ಸಂಬಂಧ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಂತೋಷ್ ಲಾಡ್ ತಿಳಿಸಿದ್ದಾರೆ.

ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವನೆ ಈ ಹಿಂದಿನಿಂದಲೂ ಇದೆ. ಆದರೆ ಸರ್ಕಾರದ ಮಟ್ಟದಲ್ಲಿ ಕೆಲಸದ ಅವಧಿ ವಿಸ್ತರಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಕೆಲಸದ ಅವಧಿ ಹೆಚ್ಚಳ ಅನುಷ್ಠಾನದ ಬಗ್ಗೆ ಕೈಗಾರಿಕೆಗಳಿಗೆ ಯಾವುದೇ ಅನುಮತಿಯನ್ನು ಇದುವರೆಗೆ ನೀಡಿಲ್ಲ. ಅದಿನ್ನು ಚರ್ಚೆಯ ಹಂತದಲ್ಲಿದೆ ಅಷ್ಟೇ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸ್ಪಷ್ಟಪಡಿಸಿದ್ದಾರೆ.

ಕೆಲಸದ ಅವಧಿ ಹೆಚ್ಚಳ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹೀಗಾಗಿ ಹಲವು ದಿನಗಳಿಂದ ಕೈಗಾರಿಕೆಗಳ ಬೇಡಿಕೆ ಇದ್ದರೂ ಅದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಕೆಲಸದ ಅವಧಿ ಹೆಚ್ಚಳಕ್ಕೆ ಕೈಗಾರಿಕೆಗಳಿಗೆ ಅನುಮತಿ ನೀಡಿಲ್ಲ ಎಂದು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಐಟಿ ಕಂಪನಿಗಳು ಸೇರಿ ಕೆಲವು ಆಯ್ದ ಔದ್ಯೋಗಿಕ ಕ್ಷೇತ್ರಗಳಲ್ಲಿ ಕೆಲಸದ ಅವಧಿಯನ್ನು ಗರಿಷ್ಠ 9ರಿಂದ 10 ಗಂಟೆಯವರೆಗೆ ವಿಸ್ತರಿಸಲು ಹೆಚ್ಚುವರಿ ಕೆಲಸದ ಅವಧಿಯನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸುವ ಪ್ರಸ್ತಾವನೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ ಎನ್ನುವ ಬಗ್ಗೆ ಚರ್ಚೆಯಾಗುತ್ತಿದೆ. ಕಾರ್ಮಿಕರ ಸಂಘಟನೆಗಳಿಂದ ಇದಕ್ಕೆ ವಿರೋಧವಿದ್ದು, ಜೊತೆಗೆ ಐಟಿ ಸೇರಿ ಕೈಗಾರಿಕಾ ಉದ್ಯೋಗಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಇದಿನ್ನೂ ಚರ್ಚಾ ಹಂತದಲ್ಲಿದೆ ಎಂದು ಹೇಳಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು