ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಸುತ್ತಾ ಅವೈಜ್ಞಾನಿಕ ವಾಹನ ಪಾರ್ಕಿಂಗ್ ಪ್ರತಿದಿನ ಕಿರಿಕ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಸುತ್ತಾ ಅವೈಜ್ಞಾನಿಕ ವಾಹನ ಪಾರ್ಕಿಂಗ್ ಪ್ರತಿದಿನ ಕಿರಿಕ್

ಬೇಲೂರು : ಬೇಲೂರು ನಗರದ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯದ ಸುತ್ತಾ ಅವೈಜ್ಞಾನಿಕ ವಾಹನ ಪಾರ್ಕಿಂಗ್ ನಿಂದ ಸ್ಥಳೀಯ ನಿವಾಸಿಗಳಿಗೆ ಮತ್ತು ವಾಹನ ಸವಾರರಿಗೆ ನೆಮ್ಮದಿ ಇಲ್ಲದಂತಾಗಿದೆ ಐತಿಹಾಸಿಕ ಪ್ರವಾಸಿ ತಾಣವಾದ ಬೇಲೂರಿಗೆ ಪ್ರತಿನಿತ್ಯ ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು ದೇವಾಲಯದ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಮನಬಂದಂತೆ ವಾಹನಗಳನ್ನು ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಪ್ರತಿನಿತ್ಯ ಸಾರ್ವಜನಿಕರಿಗೆ ಮತ್ತು ದೇವಾಲಯದ ಸುತ್ತಮುತ್ತಲ ನಿವಾಸಿಗಳಿಗೆ ದೊಡ್ಡ ತಲೆ ನೋವಾಗಿ ಪರಿಗಣಿಸಿದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರು ಯಾವುದಕ್ಕೂ ತಲೆಕೆಡಿಸಿ ಕೊಳ್ಳದೆ ಕೇವಲ ವಾಹನ ಪಾರ್ಕಿಂಗ್ ಶುಲ್ಕ ವಸೂಲಿಯಲ್ಲಿ ತೊಡಗಿದ್ದಾರೆ ಇದರಿಂದ ಸಾರ್ವಜನಿಕರು ಪ್ರತಿನಿತ್ಯ ನರಕ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ದೇವಾಲಯದ ಮುಂಭಾಗ ಯಾವುದೇ ತರಹದ ವಾಹನಗಳನ್ನು ನಿಲುಗಡೆ ನಿಷೇಧಿಸಿದ್ದರು ದೇವಾಲಯದಿಂದಲೇ ನಾಮಫಲಕಗಳನ್ನು ಅಳವಡಿಸಿದ್ದರು ನಾಮಫಲಕದ ಸುತ್ತಮುತ್ತಲು ಮನಬಂದಂತೆ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದು ದೇವಾಲಯದ ಸಿಬ್ಬಂದಿಗಳೇ ಮನಬಂದಂತೆ ಪಾರ್ಕಿಂಗ್ ಮಾಡಿಸುತ್ತಿರು ವುದು ವಿಪರ್ಯಾಸ ಇನ್ನು ದೇವಾಲಯದ ಹಿಂಭಾಗ ಪ್ರವಾಸಿಗರ ವಾಹನ ಪಾರ್ಕಿಂಗ್ ಗಾಗಿ ವಿಶಾಲವಾದ ಮೈದಾನ ಮೀಸಲಿಟ್ಟಿದ್ದು ಮೈದಾನದಲ್ಲಿ ಶುಂಠಿ ಒಣಗಿಸಲು ಶಾಮಿಯಾನ ಒಣಗಿಸಲು ಮತ್ತು ಮಲಮೂತ್ರ ವಿಸರ್ಜನೆ ಸೇರಿದಂತೆ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ವಾಹನ ಪಾರ್ಕಿಂಗ್ ಗಾಗಿ ದೇವಾಲಯದಿಂದ ಪಾರ್ಕಿಂಗ್ ನಾಮಪಾಲಕಗಳು ಅಳವಡಿಸಿದ್ದು ಕೇವಲ ನಾಮಫಲಕಗಳು ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಆಗಿವೆ ದೇವಾಲಯದಿಂದ ಕೆಲವೇ ಅಂತರದಲ್ಲಿರುವ ವಾಹನ ಪಾರ್ಕಿಂಗ್ನಲ್ಲಿ ವಾಹನ ಪಾರ್ಕಿಂಗ್ ಮಾಡಿಸದೆ ಇರುವುದು ದೇವಾಲಯದ ಆಡಳಿತಾದಿಕಾರಿಯ ಮಂಡಳಿಯ ನಿರ್ಲಕ್ಷ್ಯ ಎದ್ದು ಕಾಣುತ್ತದೆ.


ಈ ಸಂಬಂಧ ಮಾತನಾಡಿದ ಸ್ಥಳೀಯ ನಿವಾಸಿಗಳು ದೇವಾಲಯದ ಆಡಳಿತ ಮಂಡಳಿ ನಿರ್ಲಕ್ಷದಿಂದ ದೇವಾಲಯದ ಮುಂಭಾಗ ಮತ್ತು ಜೆ.ಪಿ ನಗರ ರಸ್ತೆ ಮತ್ತು ಕಂಡ ಕಂಡ ಜಾಗಗಳಲ್ಲಿ ಮನೆಗಳ ಮುಂದೆ ವ್ಯಾಪಾರ ವಹಿವಾಟು ಮಾಡುವ ಅಂಗಡಿಗಳ ಮುಂದೆ ಮನಬಂದಂತೆ ಪ್ರವಾಸಿಗರ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿದ್ದು ಇದರಿಂದ ಭಾರಿ ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಪ್ರತಿನಿತ್ಯ ಸಾವಿರಾರು ಶಾಲಾ ಮಕ್ಕಳು ವೃದ್ಧರು ಅಪಘಾತಗಳಿಗೆ ತುತ್ತಾಗುತ್ತಿದ್ದು ಸಂಬಂಧಪಟ್ಟವರು ಇನ್ನಾದರೂ ಪ್ರವಾಸಿಗರ ವಾಹನ ಪಾರ್ಕಿಂಗ್ ಗಾಗಿ ನಿಗದಿಪಡಿಸಿರುವ ಸ್ಥಳಕ್ಕೆ ಪ್ರವಾಸಿಗರ ವಾಹನಗಳನ್ನು ಪಾರ್ಕಿಂಗ್ ಮಾಡುವಂತೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ವ್ಯಾಪಾರಸ್ಥರಿಗೆ ಆಗುತ್ತಿರುವ ತೊಂದರೆಗೆ ಮುಕ್ತಿ ಕೊಡಬೇಕೆಂದು ಸಾರ್ವಜನಿಕರ ಪರವಾಗಿ ಮನವಿ ಮಾಡಿದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು