Wednesday, July 2, 2025

ಸತ್ಯ | ನ್ಯಾಯ |ಧರ್ಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ‘ಬೆಂಗಳೂರು ಉತ್ತರ’ ಎಂದು ಮರುನಾಮಕರಣ; ಸಂಪುಟ ಸಭೆಯಲ್ಲಿ ನಿರ್ಧಾರ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ರಾಜ್ಯದ ಇನ್ನೊಂದು ಜಿಲ್ಲೆಯನ್ನು ಮರು ನಾಮಕರಣ ಮಾಡಲಾಗಿದೆ. ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.

ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಹೆಚ್ಚಿಸಲು ಹಾಗೂ ಹೂಡಿಕೆದಾರನ್ನು ತನ್ನ ಕಡೆಗೆ ಸಳೆಯುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಅದರಂತೆ ಬೆಂಗಳೂರು ಉತ್ತರ ಜಿಲ್ಲೆಯ ಜೊತೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕನ್ನು ಭಾಗ್ಯನಗರ ಎಂದೂ ಮರುನಾಮಕರಣ ಮಾಡಲಾಗಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ ಬಿಸಿನೆಸ್ ಪಾರ್ಕ್ ಮತ್ತು ಫಾಕ್ಸ್‌ಕಾನ್‌ನ ಐಫೋನ್ ಅಸೆಂಬ್ಲಿ ಘಟಕದಂತಹ ಪ್ರಮುಖ ಕೈಗಾರಿಕೆಗಳಿಗೆ ಬೆಂಗಳೂರು ಗ್ರಾಮಾಂತರದಲ್ಲಿ ಇವೆ. ಇಂತಹ ದೊಡ್ಡ ದೊಡ್ಡ ಕೈಗಾರಿಕೆಗಳು ಜಿಲ್ಲೆಯಲ್ಲಿ ಇದ್ದರೂ ಸಹ ಹೂಡಿಕೆದಾರಿಗೆ ಬೆಂಗಳೂರು ‘ಗ್ರಾಮೀಣ’ ಎಂಬ ಹೆಸರು ತಪ್ಪಾಗಿ ಸಂದೇಶವನ್ನು ರವಾನೆ ಮಾಡಲಾಗುತ್ತದೆ ಎಂಬ ರಾಜಕೀಯ ನಾಯಕರು ಹಾಗೂ ಸ್ಥಳೀಯ ಸಾರ್ವಜನಿಕರು ಹೇಳಿದ್ದಾರೆ.

ಹಲವು ದಿನಗಳಿಂದ ಈ ಭಾಗದ ಜನರ ಬೇಡಿಕೆ ಇದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರುನಾಮಕರಣ ಅಗತ್ಯ ಎಂದು ಸಂಪುಟ ಸಭೆಯಲ್ಲಿ ತಿಳಿಸಲಾಯಿತು. ಆದರಿಂದಾಗಿ ಜಿಲ್ಲೆಯ ಹೆಸರನ್ನು ಬದಲಾಯಿಸುವಂತಹ ಕಾರ್ಯಗಳು ನಡೆಯುತ್ತಿದ್ದವು. ಬೆಂಗಳೂರು ಉತ್ತರ ಎಂದು ಬೆಂಗಳೂರು ಗ್ರಾಮಂತರ ಜಿಲ್ಲೆ ಮರುನಾಮಕರಣದ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸ್ತುತ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ಎಂಬ ನಾಲ್ಕು ತಾಲೂಕುಗಳಿವೆ. 2007ರಲ್ಲಿ, ಜಿಲ್ಲೆಯ ದಕ್ಷಿಣ ಭಾಗವನ್ನು ವಿಭಜಿಸಿ ರಾಮನಗರ ಜಿಲ್ಲೆಯನ್ನು ಸಹ ಮಾಡಲಾಗಿತ್ತು. ಆದರೆ ಇತ್ತೀಚಿಗೆ ರಾಮನಗರ ಜಿಲ್ಲೆಯನನ್ನು ಬೆಂಗಳೂರು ದಕ್ಷಿಣ ಎಂದು ಸರ್ಕಾರ ಮರುನಾಮಕರಣವನ್ನು ಮಾಡಿತ್ತು. ಆದರೆ ಇದೀಗ ಮತ್ತಷ್ಟು ಆರ್ಥೀಕವಾಗಿ ಮುಂದುವರೆಯಲು ಮತ್ತು ಹೂಡಿಕೆದಾರನ್ನು ತನ್ನ ಪ್ರದೇಶಕ್ಕೆ ಕರೆದುತರಲು ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಮರುನಾಮಕರಣ ಮಾಡಲು ಮುಂದಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page