Monday, July 7, 2025

ಸತ್ಯ | ನ್ಯಾಯ |ಧರ್ಮ

ಜುಲೈ 8 ರಂದು ರಾಜ್ಯದ 10 ಮಹಾನಗರ ಪಾಲಿಕೆ ನೌಕರರಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ; ವಿವಿಧ ಬೇಡಿಕೆಗೆ ಆಗ್ರಹ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.8ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯದ 10 ಮಹಾನಗರ ಪಾಲಿಕೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಮುಷ್ಕರದ ಸಂದರ್ಭದಲ್ಲಿ ರಾಜ್ಯದ 10 ಮಹಾನಗರ ಪಾಲಿಕೆಗಳು ಸಂಪೂರ್ಣ ಸ್ಥಗಿತಗೊಳ್ಳಲಿವೆ ಎಂದು ತಿಳಿಸಲಾಗಿದೆ.

ಈ ಬಗ್ಗೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್‌ನ ರಾಜ್ಯಾಧ್ಯಕ್ಷ ಅಮೃತರಾಜ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿ “ಮಹಾನಗರ ಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸಬೇಕು, ಅನುದಾನವನ್ನು ಆರ್ಥಿಕ ಇಲಾಖೆಯಿಂದಲೇ ಬಿಡುಗಡೆ ಮಾಡಬೇಕು, ನಿಯಮದಂತೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸೂಕ್ತ ತಿದ್ದುಪಡಿ ತರವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರಿಗಾಗಿಯೇ ಜಾರಿಗೆ ತಂದಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಮಹಾನಗರ ಪಾಲಿಕೆ ನೌಕರರಿಗೂ ವಿಸ್ತರಿಸಬೇಕು, ನೌಕರರಿಗೆ ಇರುವಂತೆ ಕೆಜಿಇಡಿ, ಜಿಪಿಎಫ್‌ ಸೌಲಭ್ಯವನ್ನು ಪಾಲಿಕೆ ನೌಕರರಿಗೆ ಜಾರಿಗೊಳಿಸಬೇಕು, ಪ್ರತಿ ವರ್ಷ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಮಹಾ ನಗರ ಪಾಲಿಕೆ ನೌಕರರಿಗೂ ಆಯೋಜಿಸಬೇಕು, ಹಲವಾರು ವರ್ಷಗಳಿಂದ ಮುಂಬಡ್ತಿಗೆ ವಂಚಿತರಾಗಿರುವ ನೌಕರರಿಗೆ ಮುಂಬಡ್ತಿ ನೀಡಬೇಕು ಎಂಬ ಪ್ರಮುಖ ಅಂಶಗಳನ್ನು ಒಳಗೊಂಡಂತೆ ಮುಷ್ಕರದಲ್ಲಿ ಬೇಡಿಕೆ ಇಡಲಾಗಿದೆ.

ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರೂ ಫ್ರೀಡಂ ಪಾರ್ಕ್ ನ ಮುಷ್ಕರದಲ್ಲಿ ಪಾಲ್ಗೊಳ್ಳಬೇಕು. ಅನಿವಾರ್ಯ ಕಾರಣಗಳಿಂದ ಪಾಲ್ಗೊಳ್ಳಲು ಸಾಧ್ಯವಾಗದ ನೌಕರರು ತಾವು ಕಾರ್ಯ ನಿರ್ವಹಿಸುವ ಪಾಲಿಕೆಯ ಆಯುಕ್ತರ ಕಚೇರಿ ಮುಂಭಾಗದಲ್ಲಿಯಾದರೂ ತಮ್ಮ ಬೇಡಿಕೆಗಳ ಫಲಕಗಳೊಂದಿಗೆ ಪ್ರತಿಭಟನೆ ನಡೆಸಬೇಕು’ ಎಂದು ಪಾಲಿಕೆ ನೌಕರರ ಸಂಘದ ಪರಿಷತ್ ರಾಜ್ಯಾಧ್ಯಕ್ಷ ಅಮೃತರಾಜ್ ಮನವಿ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page