Tuesday, July 8, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದ ಕೆಪಿಎಸ್ ಶಾಲೆ ಮಕ್ಕಳಿಗೆ ಶೀಘ್ರ ಉಚಿತ ಬಸ್ ವ್ಯವಸ್ಥೆ ಜಾರಿ : ಮಧು ಬಂಗಾರಪ್ಪ

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇರುವ ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದರು.

ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳು ಓದುತ್ತಿದ್ದಾರೆ. ಎಲ್‌ಕೆಜಿಯಿಂದ ಪಿಯುಸಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಈ ಶಾಲೆಯ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತವಾಗಿ ಬಸ್ ವ್ಯವಸ್ಥೆ ಆರಂಭಿಸಲು ಸರ್ಕಾರ ತೀರ್ಮಾನ ನಿರ್ಧಾರ ಕೈಗೊಂಡಿದೆ. ಸಧ್ಯಕ್ಕೆ ಯಾವ ಭಾಗದಲ್ಲಿ ತೀರಾ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್ ವ್ಯವಸ್ಥೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಅವಶ್ಯಕತೆ ಇರುವೆಡೆ ಅದನ್ನು ವಿಸ್ತರಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, 57 ಲಕ್ಷ ಮಕ್ಕಳು ಓದುತ್ತಿದ್ದಾರೆ. ಅವರೆಲ್ಲರ ಅಭಿವೃದ್ಧಿಗೆ ನನ್ನೊಂದಿಗೆ ಶಿಕ್ಷಕರು ಕೈಜೋಡಿಸಬೇಕು. ಎಲ್ಲರೂ ಶ್ರಮಿಸಿದರೆ ಸರ್ಕಾರಿ ಶಾಲೆಗಳ ಸಬಲೀಕರಣವಾಗುತ್ತದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page