Thursday, July 10, 2025

ಸತ್ಯ | ನ್ಯಾಯ |ಧರ್ಮ

6 ದಿನ ರಾಜ್ಯದಲ್ಲಿ ವರುಣನ ಆರ್ಭಟ, ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ (Karnataka Rains) ಮುಂದುವರೆದಿದೆ. ಇನ್ನೂ 6 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್‌ (Yellow Alert)  ಘೋಷಣೆ ಮಾಡಿದೆ.

 ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ
ಕಳೆದ ಒಂದು ತಿಂಗಳಿನಿಂದ ಕರಾವಳಿ ಭಾಗದಲ್ಲಿ ಸಹ ಮಳೆ ಆರ್ಭಟ ಹೆಚ್ಚಿದ್ದು, ನಾಳೆ ಅಂದರೆ ಜುಲೈ 10ರ ಸಹ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಹಾಗಾಗಿ ಎಚ್ಚರಿಕೆ ವಹಿಸುವಂತೆ ಇಲಾಖೆ ಹೇಳಿದೆ. ಕರ್ನಾಟಕದ ಹಲವೆಡೆ ಧಾರಾಕಾರ ಮಳೆ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಸಹ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

 ಈ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಹಾವೇರಿ, ಬಾಗಲಕೋಟೆ, ಬೀದರ್, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗುವ ಸಾಧ್ಯತೆ ಇದೆ.

ಇನ್ನು ಜುಲೈ 11 ಹಾಗೂ 12 ಮತ್ತು 13 ರಂದು ಸಹ ಕರಾವಳಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿ ಉಳಿದ ಜಿಲ್ಲೆಗಳಲ್ಲಿ ಸಹ ನಿರೀಕ್ಷೆಗಿಂತ ಹೆಚ್ಚಿನ ಮಳೆ ಆಗುವ ಸಂಭವ ಇದೆ. ಈ ದಿನಗಳಲ್ಲಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ಮೈಸೂರು, ಮಂಡ್ಯ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ.

ಜುಲೈ 14 ಮತ್ತು 15ರಂದು ಸಹ ಈ ಮಳೆಯ ಆರ್ಭಟ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದೆ. ಇನ್ನು ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಬಳ್ಳಾರಿ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page