ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ : ದೇವನಹಳ್ಳಿ ರೈತರ ಭೂಸ್ವಾಧೀನ ಇಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ : ದೇವನಹಳ್ಳಿ ರೈತರ ಭೂಸ್ವಾಧೀನ ಇಲ್ಲ

ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇವನಹಳ್ಳಿ ರೈತರ ಪರವಾಗಿ ನಾವಿದ್ದೇವೆ. ಹೀಗಾಗಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ಹೇಳಿದರು.

ಸ್ವಯಂಪ್ರೇರಿತರಾಗಿ ಭೂಮಿ ನೀಡುವ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ. ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ. ಆದರೆ ಬಲವಂತದ ಭೂಸ್ವಾಧೀನ ಇಲ್ಲ ಎಂದು ಹೇಳಿದ್ದಾರೆ.

ಆ ಮೂಲಕ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು ಎಂದಿದ್ದಾರೆ.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.

ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ,  ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಅವರ ಸಾಮಾಜಿಕ ನ್ಯಾಯ ಕೇವಲ ನುಡಿಯಲ್ಲಿ ಮಾತ್ರವಲ್ಲ ನಡೆಯಲ್ಲೂ ಅದನ್ನು ಇಂದು ಅವರು ತೋರಿಸಿಕೊಟ್ಟಿದ್ದಾರೆ : ನಟ ಪ್ರಕಾಶ್ ರಾಜ್

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು