ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಅಲೆಮಾರಿ ಸಮುದಾಯದ ಮೇಲಿನ ದೌರ್ಜನ್ಯ ತಡೆಗಟ್ಟಲು ಒತ್ತಾಯ: ಮಾಜಿ ಸಚಿವ ಹೆಚ್.ಆಂಜನೇಯ ಆಕ್ರೋಶ

PPeepal Media Desk

Peepal Media Desk ರಾಜಕೀಯ

• 1 ನಿಮಿಷದ ಓದು

ಅಲೆಮಾರಿ ಸಮುದಾಯದ ಮೇಲಿನ ದೌರ್ಜನ್ಯ ತಡೆಗಟ್ಟಲು ಒತ್ತಾಯ: ಮಾಜಿ ಸಚಿವ ಹೆಚ್.ಆಂಜನೇಯ ಆಕ್ರೋಶ

ಬೆಂಗಳೂರು ಜು.16: ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ದಿ ವೇದಿಕೆ ಆಶ್ರಯದಲ್ಲಿ ಇಂದು ಶಾಸಕರ ಭವನದ ಸಭಾಂಗಣದಲ್ಲಿ ಅಲೆಮಾರಿಗಳ ಮೇಲೆ ನಡೆಯುತ್ತಿರುವ ನಿರಂತರ ಅತ್ಯಾಚಾರ, ದೌರ್ಜನ್ಯ ಕೊಲೆಯಂತಹ ಗಂಭೀರ ವಿಚಾರಗಳ ಬಗ್ಗೆ ಮಾಜಿ ಸಚಿವ ಹೆಚ್.ಆಂಜನೇಯರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು ಎಂದು ಅಲೆಮಾರಿಗಳ ಅಭ್ಯುದಯ ನಾಯಕ ಲೋಹಿತಾಕ್ಷ ಬಿ ಆರ್ ತಿಳಿಸಿದರು.

ಸಭೆಯಲ್ಲಿ ಮೊದಲಿಗೆ ದಿ: 09.07.2025 ರಂದು ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ತಾವರೆಕೆರೆಯಲ್ಲಿ ಕು. ಅರುಣಾ ಬಿನ್ ನಾಗಪ್ಪ ಶಿಳ್ಳೆಕ್ಯಾತ ಸಮುದಾಯದ 13ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಅಮಾನವೀಯ ಘಟನೆಯನ್ನು ಖಂಡಿಸಿ ಮೃತ ಬಾಲಕಿಗೆ ಸಂತಾಪ ಸೂಚಿಸಲಾಯಿತು.

ಸಭೆಯಲ್ಲಿ  ಮಾಜಿ ಸಂಸದರಾದ ಬಿ.ಎಲ್.ಚಂದ್ರಪ್ಪ, ಕೆಪಿಸಿಸಿ ಎಸ್‌ಸಿ ವಿಭಾಗದ ಅಧ್ಯಕ್ಷ ಧರ್ಮಸೇನ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ಜಿ.ಸಿದ್ದರಾಮಯ್ಯ, ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜೆಗೆರೆ ಜಯಪ್ರಕಾಶ್, ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಮಣಯ್ಯ, ದಲಿತ ಸಾಹಿತಿ ವಡ್ಡಗೆರೆ ನಾಗರಾಜಯ್ಯ, ಡಾ.ಬಾಲಗುರುಮೂರ್ತಿ, ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಮಾದಿಗ ಮೀಸಲಾತಿ ಹೋರಾಟ ಸಮಿತಿ ಮುಖಂಡರಾದ  ಅಂಬಣ್ಣ ಆರೋಲಿಕರ, ಶ್ರೀ ಭೀಮಾಶಂಕರ್ ಹಾಗೂ ಅಲೆಮಾರಿ ಮುಖಂಡರಾದ ಶೇಷಪ್ಪ ಅಂದೋಳ್ ಮಾತನಾಡಿ, ಅಲೆಮಾರಿ ಸಮುದಾಯವು ಎದರಿಸುತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ವಿಶೇಷವಾಗಿ ವಿಷಯವನ್ನು ಮಂಡಿಸಿ, ಪರಿಹಾರಕ್ಕೆ ಸೂಕ್ತ ಸಲಹೆಗಳನ್ನು ಪಡೆಯಲಾಯಿತು.

ಸಭೆಯಲ್ಲಿ ಅಲೆಮಾರಿ ಸಮುದಾಯದ ಪ್ರಮುಖ ಮುಖಂಡರು ಚಾವಡೆ ಲೋಕೇಶ್, ಕೆ.ವೀರೇಶ್, ಸುಭಾಷ್ ಚವಾಣ್, ಶಾಂತರಾಜ್, ಶಿವಕುಮಾರ್ ಬಳ್ಳಾರಿ, ಹನುಮಂತು, ಬಸವರಾಜ್ ನಾರಾಯಣಕೆರೆ ಸೇರಿದಂತೆ ಮುಂತಾದವರು ಸದರಿ ಸಭೆಯಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು ಎಂದು ಲೋಹಿತಾಕ್ಷ ಪ್ರಕಟಣೆಯಲ್ಲಿ ತಿಳಿಸಿದರು.

PPeepal Media Desk

Peepal Media Desk

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು