Wednesday, August 13, 2025

ಸತ್ಯ | ನ್ಯಾಯ |ಧರ್ಮ

ಬಾಲ್ಯವಿವಾಹ ತಡೆಗೆ “ಅಕ್ಕಾ ಪಡೆ” ಜಾರಿಗೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳಾ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡಂತೆ ಬಾಲ್ಯ ವಿವಾಹ ತಡೆ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧವಾಗಿ ರಾಜ್ಯದಲ್ಲಿ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಬ್ಬಾಗುತ್ತಿದೆ, ಬಾಲ್ಯ ವಿವಾಹಗಳ ಸಂಖ್ಯೆ ಹೆಬ್ಬಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಚಿವರು ಉತ್ತರಿಸಿದರು.

ಅಕ್ಕಾ ಪಡೆ ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಅಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕಾ ಪಡೆ ಆರಂಭಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬಾಲ್ಯವಿವಾಹ ಸಾಮಾಜಿಕ ಪೀಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗಾಗಿ ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳ ಕಾವಲು ಸಮಿತಿಯನ್ನು ರಚಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page