Thursday, August 14, 2025

ಸತ್ಯ | ನ್ಯಾಯ |ಧರ್ಮ

ನಟ ದರ್ಶನ್ ಜಾಮೀನು ಅರ್ಜಿ ವಜಾ, ಒಟ್ಟು ಏಳು ಮಂದಿ ಮತ್ತೆ ಪರಪ್ಪನ ಅಗ್ರಹಾರಕ್ಕೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ನಟ ದರ್ಶನ್ ಸೇರಿ ಏಳು ಜನರ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ಮೂಲಕ ದರ್ಶನ್ ಗೆ ಜೈಲೇ ಗತಿ ಎಂಬಂತಾಗಿದೆ.

ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು.

ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು, ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.

ವಾದ ಪ್ರತಿವಾದಗಳನ್ನು ಸಂಪೂರ್ಣವಾಗಿ ಆಲಿಸಿದ ಬಳಿಕ, ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿ, ನಟ ದರ್ಶನ್ ಮತ್ತೆ ಜೈಲು ಪಾಲಾಗಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page