Saturday, August 23, 2025

ಸತ್ಯ | ನ್ಯಾಯ |ಧರ್ಮ

20 ವರ್ಷಕ್ಕಿಂತ ಹಳೆಯದಾದ ವಾಹನಗಳ ನೋಂದಣಿ ಶುಲ್ಕ ಹೆಚ್ಚಳ

ದೇಶದಲ್ಲಿ 20 ವರ್ಷಕ್ಕಿಂತ ಹಳೆಯದಾದ ವಾಹನಗಳ ನೋಂದಣಿ ನವೀಕರಣ ಶುಲ್ಕವನ್ನು ಹೆಚ್ಚಿಸುವುದಾಗಿ ಕೇಂದ್ರ ರಸ್ತೆ ಸಾರಿಗೆ ಇಲಾಖೆ ಶುಕ್ರವಾರ ಪ್ರಕಟಿಸಿದೆ. 20 ವರ್ಷಗಳ ನಂತರ ಹಳೆಯ ವಾಹನಗಳನ್ನು ಬಳಸದಂತೆ ಜನರನ್ನು ಪ್ರೋತ್ಸಾಹಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

20 ವರ್ಷಕ್ಕಿಂತ ಮೇಲ್ಪಟ್ಟ ಲಘು ಮೋಟಾರು ವಾಹನಗಳ (ಎಲ್‌ಎಂವಿ) ನವೀಕರಣ ಶುಲ್ಕವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ, 20 ವರ್ಷಕ್ಕಿಂತ ಮೇಲ್ಪಟ್ಟ ದ್ವಿಚಕ್ರ ವಾಹನಗಳ ನವೀಕರಣ ಶುಲ್ಕವನ್ನು ₹1 ಸಾವಿರದಿಂದ ₹2 ಸಾವಿರಕ್ಕೆ ಮತ್ತು ಮೂರು ಮತ್ತು ನಾಲ್ಕು ಚಕ್ರಗಳ ವಾಹನಗಳ ನವೀಕರಣ ಶುಲ್ಕವನ್ನು ₹3,500 ದಿಂದ ₹5 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page