Thursday, August 28, 2025

ಸತ್ಯ | ನ್ಯಾಯ |ಧರ್ಮ

ಮಳೆ ಸುದ್ದಿ : ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತೀವ್ರತರವಾದ ಮಳೆಯ ಹಿನ್ನೆಲೆಯಲ್ಲಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ಶಿವಮೊಗ್ಗ ಹಾಗು ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಎನ್ನಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗು ಸಾಗರ ತಾಲೂಕಿನ ಅಂಗನವಾಡಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿ ಸಾಗರ ತಹಸೀಲ್ದಾರ್ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದ ಹಿನ್ನೆಲೆ ಜಿಲ್ಲೆಯ 10 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೇ ಹಾಗು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡ, ಯಲ್ಲಾಪುರ ಹಾಗು ದಾಂಡೇಲಿ ತಾಲೂಕುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page