Saturday, August 30, 2025

ಸತ್ಯ | ನ್ಯಾಯ |ಧರ್ಮ

ಅಮೆರಿಕದಂತೆ ಗಡಿ ಗೋಡೆ ಕಟ್ಟುತ್ತೀರಾ? ಅಕ್ರಮ ವಲಸೆ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿ: ಅಕ್ರಮ ವಲಸೆಗಾರರು ದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಭಾರತ ಕೂಡ ಅಮೆರಿಕಾದಂತೆ ಗಡಿ ಗೋಡೆ ನಿರ್ಮಿಸಲು ಬಯಸುತ್ತಿದೆಯೇ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ನ್ಯಾ. ಸೂರ್ಯಕಾಂತ್, ನ್ಯಾ. ಜೋಯ್ಮಾಲ್ಯ ಬಾಗ್ಚಿ ಮತ್ತು ನ್ಯಾ. ವಿಪುಲ್ ಎಂ ಪಂಚೋಲಿ ಅವರನ್ನೊಳಗೊಂಡ ಪೀಠವು, ಅಕ್ರಮ ವಲಸೆಗಾರರನ್ನು, ವಿಶೇಷವಾಗಿ ಬಾಂಗ್ಲಾದೇಶದವರನ್ನು ಗಡೀಪಾರು ಮಾಡಲು ಸರ್ಕಾರಗಳು ಅನುಸರಿಸುವ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳ (SOP) ಕುರಿತು ಮಾಹಿತಿ ನೀಡುವಂತೆ ಕೇಂದ್ರವನ್ನು ಕೇಳಿದೆ. ಈ ವಿಷಯದಲ್ಲಿ ಗುಜರಾತ್ ಸರ್ಕಾರವನ್ನೂ ಒಂದು ಪಕ್ಷವನ್ನಾಗಿ ಸೇರಿಸುವುದಾಗಿ ನ್ಯಾಯಾಲಯ ತಿಳಿಸಿದೆ.

ಬಾಂಗ್ಲಾದೇಶದ ಪ್ರಜೆಗಳು ಎಂಬ ಶಂಕೆಯ ಮೇಲೆ ಬಂಗಾಳಿ ಭಾಷೆ ಮಾತನಾಡುವ ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ವಲಸೆ ಕಲ್ಯಾಣ ಮಂಡಳಿ ಸಲ್ಲಿಸಿದ್ದ ಅರ್ಜಿಯ ಕುರಿತು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದರು.

ಸಂತ್ರಸ್ತ ಪಕ್ಷಗಳ ಯಾರೂ ನ್ಯಾಯಾಲಯದ ಮುಂದೆ ಹಾಜರಿಲ್ಲ ಎಂದು ಅವರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಬಹುಶಃ ಆರ್ಥಿಕ ಸಂಪನ್ಮೂಲಗಳ ಕೊರತೆಯಿಂದಾಗಿ ಅವರು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿರದೆ ಇರಬಹುದು ಎಂದು ಅಭಿಪ್ರಾಯಪಟ್ಟಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page