ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ನಮ್ಮ ಸರ್ಕಾರ ಜಾತಿ ನೋಡಲ್ಲ: ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿ.ಎಂ.ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ನಮ್ಮ ಸರ್ಕಾರ ಜಾತಿ ನೋಡಲ್ಲ: ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಆ 31: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು-ಇಂದು ಗ್ಯಾರಂಟಿಗಳು ವರದನವಾಗಿವೆ.
ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದರು.

ಚಾತುವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ನಾವು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕ ಸಬಲರಾಗಬೇಕು. ಈ ಉದ್ದೇಶದಿಂದಲೇ ನಾನು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆವು ಎಂದು ವಿವರಿಸಿದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ ಎಂದರು.

ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿರುವುದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕ ಚಟುವಟಿಕೆಗೆ ವೇಗ ಒದಗಿ ಬಂದಿದೆ ಎಂದರು.

ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದರು.

ರಾಜ್ಯದಲ್ಲಿ ದಲಿತ ಹೋರಾಟ ಜೋರಾಗಿದ್ದ ಸಂದರ್ಭದಲ್ಲಿ, ” ಹೆಂಡ ಬೇಡ-ಶಾಲೆ ಬೇಕು” ಎನ್ನುವ ಘೋಷಣೆ ಕೂಗಿದ್ದರು. ಈ ಘೋಷಣೆಯ ಪ್ರೇರಣೆಯಿಂದ ನಾನು ಮೊರಾರ್ಜಿ ವಸತಿ ಶಾಲೆಗಳನ್ನು ಆರಂಭಿಸಿದೆ. ಈಗ ಹೋಬಳಿಗೊಂದು ವಸತಿ ಶಾಲೆಗಳಿವೆ ಎಂದರು.

ನಾನು ಓದುವಾಗ ಹೋಟೆಲಿಂದ ಸಾಂಬಾರು ತಂದು, ರೂಮಲ್ಲಿ ಅನ್ನ ಮಾಡಿಕೊಂಡು ತಿನ್ನುತ್ತಿದ್ದೆವು. ಈ ಕಷ್ಟ ನನಗೆ ಗೊತ್ತಿದೆ.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಶಪಥ ಮಾಡಬೇಕು. ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು ಎಂದು ಒತ್ತಾಯಿಸಿದರು.

ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ-ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ ಎಂದು ಕರೆ ನೀಡಿದರು.

ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಯತೀಂದ್ರ ಸಿದ್ದರಾಮಯ್ಯ, ದರ್ಶನ್ ದೃವನಾರಾಯಣ್, ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು ಸೇರಿ ಉಪ್ಪಾರ ಸಮುದಾಯದ ಮುಖಂಡರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು