ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ವಿದ್ಯಾರ್ಥಿ ನಿಲಯಗಳಿಗೆ ಹೊಸ ನಿಯಮ ಸರ್ಕಾರದಿಂದ ಮಹತ್ವದ ಆದೇಶ

ವಿದ್ಯಾರ್ಥಿ ನಿಲಯಗಳಿಗೆ ಹೊಸ ನಿಯಮ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಹಾಗೂ ಮೆಟ್ರಿಕ್ ನಂತರದ ಎಲ್ಲಾ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಲು ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ಜಿ.ಪಂ. ಸಿಇಓ ಅವರು ಹೊರಡಿಸಿರುವ ಈ ಸುತ್ತೋಲೆಯ ಪ್ರಕಾರ, ವಿದ್ಯಾರ್ಥಿ ನಿಲಯಗಳಲ್ಲಿರುವ ಸಿ.ಸಿ.ಟಿವಿ ಕ್ಯಾಮೆರಾಗಳನ್ನು ನಿರಂತರವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಕಡ್ಡಾಯ. ಕ್ಯಾಮೆರಾ ಕೆಟ್ಟು ಹೋದರೆ ತಕ್ಷಣ ದುರಸ್ತಿ ಮಾಡಿಸಬೇಕು. ತಿಂಗಳಿಗೊಮ್ಮೆ ವೀಡಿಯೋ ದೃಶ್ಯಗಳನ್ನು ಸಿಡಿ ಅಥವಾ ಪೆನ್‌ಡ್ರೈವ್‌ನಲ್ಲಿ ಸಂಗ್ರಹಿಸಿಡಬೇಕು.

ಪ್ರಮುಖ ಅಂಶಗಳು:

  • ವಿದ್ಯಾರ್ಥಿಗಳು ನಿಲಯದ ಹೊರಗೆ ಹೋಗುವಾಗ ಮತ್ತು ಒಳಗೆ ಬರುವಾಗ ಹೆಸರು, ಸಮಯ, ಸ್ಥಳ, ದಿನಾಂಕ ರಿಜಿಸ್ಟರ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು.
  • ವಿದ್ಯಾರ್ಥಿನಿಯರು ರಜೆ ಮೇಲೆ ತೆರಳಿದಾಗ, ಪೋಷಕರಿಗೆ ವಿಡಿಯೋ ಕರೆ ಮಾಡಿ ಸುರಕ್ಷಿತವಾಗಿ ಮನೆ ತಲುಪಿದ ಕುರಿತು ಖಚಿತಪಡಿಸಿಕೊಳ್ಳಬೇಕು.
  • ಬಾಲಕಿಯರ ನಿಲಯಗಳ ಹತ್ತಿರ ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು.
  • ಅನುಮಾನಾಸ್ಪದ ವ್ಯಕ್ತಿಗಳು ನಿಲಯದ 1 ಕಿಮೀ ವ್ಯಾಪ್ತಿಯಲ್ಲಿ ಕಂಡುಬಂದರೆ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು.
  • ನಿಲಯ ಸಿಬ್ಬಂದಿ ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಹಾಜರಿದ್ದು ವಿದ್ಯಾರ್ಥಿಗಳ ಚಲನವಲನಗಳ ಮೇಲೆ ನಿಗಾ ಇರಿಸಬೇಕು.
  • ರಾತ್ರಿ ಕಾವಲುಗಾರರು ಸಂಜೆ 5ರಿಂದ ಬೆಳಿಗ್ಗೆ 7ರವರೆಗೆ ಕರ್ತವ್ಯ ನಿರ್ವಹಿಸಬೇಕು.
  • ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿರ್ಬಂಧಿಸಲು ಸೂಚನೆ ನೀಡಬೇಕು.
  • ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಲೈಂಗಿಕ ದೌರ್ಜನ್ಯ ತಡೆ ಮತ್ತು ಮಾನಸಿಕ ಆರೋಗ್ಯ ಕುರಿತು ಕಾರ್ಯಾಗಾರ ಆಯೋಜಿಸಬೇಕು.
  • ಒತ್ತಡ ಅಥವಾ ಖಿನ್ನತೆ ಅನುಭವಿಸುವ ವಿದ್ಯಾರ್ಥಿಗಳಿಗೆ ನುರಿತ ಸಮಾಲೋಚಕರಿಂದ ಚಿಕಿತ್ಸೆ ಒದಗಿಸಬೇಕು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಈ ನಿಯಮಗಳನ್ನು ನಿಲಯ ಮೇಲ್ವಿಚಾರಕರು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು