ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದೆಲ್ಲೆಡೆ ಬಿಗಿ ಭದ್ರತೆ; ಅಘೋಷಿತ ಬಂದ್!

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ: ನಗರದೆಲ್ಲೆಡೆ ಬಿಗಿ ಭದ್ರತೆ; ಅಘೋಷಿತ ಬಂದ್!

ಬಹುತೇಕ ಸಂದರ್ಭಗಳಲ್ಲಿ ವಿವಾದಿತ ಕೇಂದ್ರಬಿಂದುವಾಗಿರುವ, ಹೆಚ್ಚಿನ ಸಂದರ್ಭಗಳಲ್ಲಿ ಕೋಮುವಾದಿ ಶಕ್ತಿಗಳಿಗೆ ಆಹಾರವಾಗುವ ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಗೆ ಈ ಬಾರಿ ಬಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸುಮಾರು 5 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.

ನಗರದಾದ್ಯಂತ ಯಾವುದೇ ಅಹಿತಕರ ದುರ್ಘಟನೆಗಳು ನಡೆಯದಂತೆ ಪೊಲೀಸರು ಶಿವಮೊಗ್ಗ ನಗರದಾದ್ಯಂತ ವಿಶೇಷವಾಗಿ ಗಣಪತಿ ವಿಸರ್ಜನೆಯ ಮೆರವಣಿಗೆ ಹೋಗುವ ಬೀದಿಗಳಲ್ಲಿ ಬಿಗಿಬಂದೋಬಸ್ತ್ ಕೈಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಶಾಲೆ ಕಾಲೇಜುಗಳಿಗೆ (ಅಂಗನವಾಡಿಯಿಂದ ಪಿಯುಸಿ) ರಜೆ ಘೋಷಣೆ ಮಾಡಲಾಗಿದೆ.

ಅನೇಕ ಸಂದರ್ಭಗಳಲ್ಲಿ ಶಿವಮೊಗ್ಗದ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ವೇಳೆ ಗಲಾಟೆಗಳು ನಡೆದಿವೆ. ಈ ಹಿನ್ನಲೆಯಲ್ಲಿ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಆಗುವವರೆಗೆ ಪೊಲೀಸ್ ಇಲಾಖೆಗೆ ದೊಡ್ಡ ಟೆನ್ಷನ್. ಇಂದಿನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸೇರಿದಂತೆ ಹೊರಜಿಲ್ಲೆಯಿಂದ ದೊಡ್ಡ ಸಂಖ್ಯೆಯಲ್ಲಿ ಜನರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ನಗರದಲ್ಲಿ ಜನಸಾಗರವೇ ಸೇರುವುದರಿಂದ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಹುತೇಕ ಬಂದ್ ಆಗಲಿವೆ. ಮದ್ಯ ಮಾರಾಟಕ್ಕೆ ಜಿಲ್ಲಾಢಳಿತ ನಿಷೇಧ ಹೇರಿದೆ.

ಪೊಲಿಸರು ಶಿವಮೊಗ್ಗ ನಗರದ ಪ್ರಮುಖ ರಸ್ತೆಯಲ್ಲಿ ಪಥಸಂಚಲನ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ಪೊಲೀಸ್ ಮೈದಾನದಿಂದ ಪಥಸಂಚಲನ ಆರಂಭವಾಗಿದ್ದು, ಅಮೀರ್ ಅಹ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ತೀರ್ಥಹಳ್ಳಿ ರಸ್ತೆಯಲ್ಲಿ ಪಥಸಂಚಲನ ಮಾಡಲಾಗಿದೆ. ಇನ್ನು ಇದರಲ್ಲಿ ಡಿಎಆರ್, ಆರ್​ಎಎಫ್, ಕೆಎಸ್ಆರ್​ಪಿ, ಸಿವಿಲ್ ಪೊಲೀಸರು ಭಾಗಿಯಾಗಿದ್ದರು.

ಗಣೇಶ ಮೆರವಣಿಗೆ ವೇಳೆ ಸಾವಿರಾರು ಜನರು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಐವರು ಎಎಸ್​ಪಿ, 14 ಡಿವೈಎಸ್​ಪಿ, 40 ಪಿಐ, 75 ಪಿಎಸ್ಐ ಸೇರಿದಂತೆ ಶಿವಮೊಗ್ಗದಾದ್ಯಂತ ಭದ್ರತೆಗಾಗಿ 5,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಶಿವಮೊಗ್ಗಕ್ಕೆ ಪೊಲೀಸರು ಆಗಮಿಸಿದ್ದಾರೆ. 15 ಡಿಎಆರ್ ತುಕಡಿ, 20 ಕೆಎಸ್ಆರ್​ಪಿ ತುಕಡಿ, ಹೋಮ್​ಗಾರ್ಡ್ಸ್ ಬಳಕೆ ಮಾಡಲಾಗಿದೆ. ಇನ್ನು 1 ಸಾವಿರ ಸಿಸಿಕ್ಯಾಮರಾ ಅಳವಡಿಕೆ, 100 ವಿಡಿಯೋ ಕ್ಯಾಮರಾ, ಜನಸಂದಣಿ ಮೇಲೆ ನಿಗಾವಹಿಸಲು 20 ಡ್ರೋನ್ ಕ್ಯಾಮರಾಗಳ ಬಳಕೆ ಮಾಡಲಾಗುತ್ತದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು